ಹಾವೇರಿ :ಕೃಷಿ ಮತ್ತು ಕೃಷಿಗೆ ಪೂರಕ ಚಟುವಟಿಕೆಗಳಿಗೆ ಸರ್ಕಾರದಿಂದ ನಿರ್ಬಂಧವಿಲ್ಲ. ಪೆಟ್ರೋಲ್ ಬಂಕ್‌ಗಳಲ್ಲಿ ರೈತರಿಗೆ ಅಗತ್ಯವಿರುವಷ್ಟು ಪೆಟ್ರೋಲ್ ಮತ್ತು ಡೀಸೆಲ್ ವಿತರಣೆ ಮಾಡಬೇಕೆಂದು ಕೃಷಿ ಸಚಿವ ಬಿ ಸಿ ಪಾಟೀಲ್ ಸೂಚಿಸಿದರು.
ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ರೈತರಿಗೆ ಸಹಕರಿಸಲು ಬಿ ಸಿ ಪಾಟೀಲ್ ಸೂಚನೆ.. - Haveri District Arbitration Council
ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಬಾರದು. ಅಧಿಕಾರಿಗಳ ಜೊತೆಗೆ ನಾವಿದ್ದೇವೆ. ಒಂದು ವೇಳೆ ಕಳಪೆ ಬಿತ್ತನೆ ಬೀಜದಿಂದ ರೈತರು ಆತ್ಮಹತ್ಯೆ ಮಾಡಿಕೊಂಡ್ರೆ ಅದು ಆತ್ಮಹತ್ಯೆ ಅಲ್ಲ, ಅವರ ಕೊಲೆ ಮಾಡಿದಂತೆಯೇ ಎಂದರು.
ಹಾವೇರಿ ನಗರದ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಪೊಲೀಸರು ಸಹ ರೈತರಿಗೆ ಯಾವುದೇ ತೊಂದರೆ ಮಾಡದೆ ಸಹಕರಿಸುವಂತೆ ಸೂಚಿಸಿದ್ರು. ಕಳಪೆ ಬಿತ್ತನೆ ಬೀಜ ಮಾರಾಟ ಮಾಡುವವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲು ಅಧಿಕಾರಿಗಳು ಹಿಂದೇಟು ಹಾಕಬಾರದು. ಅಧಿಕಾರಿಗಳ ಜೊತೆಗೆ ನಾವಿದ್ದೇವೆ. ಒಂದು ವೇಳೆ ಕಳಪೆ ಬಿತ್ತನೆ ಬೀಜದಿಂದ ರೈತರು ಆತ್ಮಹತ್ಯೆ ಮಾಡಿಕೊಂಡ್ರೆ ಅದು ಆತ್ಮಹತ್ಯೆ ಅಲ್ಲ, ಅವರ ಕೊಲೆ ಮಾಡಿದಂತೆಯೇ ಎಂದರು.
ಲಾಕ್‌ಡೌನ್‌ನಿಂದ ಹೂವಿನ ಮಾರುಕಟ್ಟೆಗೂ ತೊಂದರೆ ಆಗಿದೆ. ಎಷ್ಟು ಪ್ರಮಾಣದ ಹಾನಿಯಾಗಿದೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ವರದಿ ಕೊಡಲು ಸಿಎಂ ಈಗಾಗಲೇ ಸೂಚಿಸಿದ್ದಾರೆ. ವರದಿ ನಂತರ ಸೂಕ್ತ ಪರಿಹಾರ ವಿತರಣೆ ಮಾಡಲಾಗುವುದು. ಜೊತೆಗೆ ಬಿತ್ತನೆ ಬೀಜ, ರಸಗೊಬ್ಬರವನ್ನ ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಸಚಿವ ಪಾಟೀಲ್ ಎಚ್ಚರಿಸಿದರು.