ಕರ್ನಾಟಕ

karnataka

ETV Bharat / state

ಹಿರೇಕೆರೂರು ಕ್ಷೇತ್ರದಿಂದ ಬಿ.ಸಿ. ಪಾಟೀಲ್ ನಾಮಪತ್ರ ಸಲ್ಲಿಕೆ - ಕಾರ್ಯಕರ್ತರ ಬೃಹತ್ ಮೆರವಣಿಗೆ

ಹಾವೇರಿ ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಗೆ ಬಿ.ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಬಿ.ಸಿ ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

By

Published : Nov 18, 2019, 2:53 PM IST

ಹಾವೇರಿ: ಜಿಲ್ಲೆಯ ಹಿರೇಕೆರೂರು ಕ್ಷೇತ್ರದಿಂದ ಉಪಚುನಾವಣೆಗೆ ಇಂದು ಬಿ.ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಬಿ.ಸಿ. ಪಾಟೀಲ್ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಸುವ ಮೊದಲು ಕಾರ್ಯಕರ್ತರ ಜೊತೆ ಬೃಹತ್ ಮೆರವಣಿಗೆ ನಡೆಸಿದರು. ಹಿರೇಕೆರೂರು ಶಂಕರ್ ವೃತ್ತದಿಂದ ತೆರೆದ ವಾಹನದಲ್ಲಿ ಆರಂಭವಾದ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಕೇಸರಿ ಧ್ವಜಗಳು, ಪ್ರಧಾನಿ ನರೇಂದ್ರ ಮೋದಿ ಮುಖವಾಡಗಳನ್ನ ಹಿಡಿಯುವ ಮೂಲಕ ಕಾರ್ಯಕರ್ತರು ಕುಣಿದು ಕುಪ್ಪಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಯು.ಬಿ. ಬಣಕಾರ, ಸಂಸದ ಬಿ.ವೈ. ರಾಘವೇಂದ್ರ ಸೇರಿದಂತೆ ವಿವಿಧ ಮುಖಂಡರು ಪಾಲ್ಗೊಂಡಿದ್ದರು.

ABOUT THE AUTHOR

...view details