ಕರ್ನಾಟಕ

karnataka

ETV Bharat / state

ಮನೆಯಲ್ಲೇ ಕೋವಿಡ್​ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಬಿ.ಸಿ. ಪಾಟೀಲ್ ಕೊಟ್ಟ ಕಾರಣ ಹೀಗಿದೆ.. - ಕೊರೊನಾ ಲಸಿಕೆ

ವೈದ್ಯಕೀಯ ಸಿಬ್ಬಂದಿಯನ್ನು ತಮ್ಮ ಮನೆಗೇ ಕರೆಯಿಸಿ ಕೋವಿಡ್​ ಲಸಿಕೆ ಹಾಕಿಸಿಕೊಂಡಿದ್ದಕ್ಕೆ ಕೃಷಿ ಸಚಿವ ಬಿ ಸಿ ಪಾಟೀಲ್​ ಸಮರ್ಥನೆ ನೀಡಿದ್ದಾರೆ. ಆಸ್ಪತ್ರೆಗೆ ಹೋಗಿದ್ದರೆ ನೂರಾರು ಜನರಿಗೆ ಸಮಸ್ಯೆ ಆಗ್ತಿತ್ತು ಎಂದಿದ್ದಾರೆ.

BC Patil
ಬಿ.ಸಿ ಪಾಟೀಲ್

By

Published : Mar 2, 2021, 4:45 PM IST

ಹಿರೇಕೆರೂರು (ಹಾವೇರಿ):ಮನೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದು ದೊಡ್ಡ ವಿಷಯವೇನಲ್ಲ. ಅದರಲ್ಲಿ ತಪ್ಪೇನಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಪ್ರಶ್ನಿಸಿದ್ದಾರೆ. ನಾವೇನು ಅಪರಾಧ ಮಾಡಿದ್ದೇವಾ? ಕಳ್ಳತನ ಮಾಡಿದ್ದೀವಾ.? ನಾನು ಸರ್ಕಾರದ ಒಂದು ಭಾಗ ಎಂದಿದ್ದಾರೆ.

ನಾನು ಮನೆಯಲ್ಲಿ ಲಸಿಕೆ ಹಾಕಿಸಿಕೊಂಡು ಮಾದರಿಯಾಗಿದ್ದೇನೆ. ಈ ವಿಷಯ ಎಲ್ಲರಿಗೂ ತಿಳಿಯಿತು. ಇದರಿಂದ ಇನ್ನಷ್ಟು ಮಂದಿ ಲಸಿಕೆ ಹಾಕಿಸಿಕೊಳ್ಳಲು ಮುಂದೆ ಬರುತ್ತಾರೆ. ನಾನು ಆಸ್ಪತ್ರೆಗೆ ಹೋದರೆ ಜನಸಾಮಾನ್ಯರ ಚಿಕಿತ್ಸೆಗೆ ತೊಂದರೆಯಾಗುತ್ತಿತ್ತು. ಜನರು ಗುಂಪಾಗುತ್ತಿದ್ದರು. ಆದರೆ ಮನೆಯಲ್ಲಿ ಎಲ್ಲರೂ ಕಾಯುತ್ತಿದ್ದರು, ಹೀಗಾಗಿ ಮನೆಯಲ್ಲೇ ಲಸಿಕೆ ಹಾಕಿಸಿಕೊಂಡಿದ್ದೇನೆ ಎಂದು ಕೃಷಿ ಸಚಿವರು ಸಮರ್ಥನೆ ನೀಡಿದ್ದಾರೆ.

ಮನೆಯಲ್ಲಿ ಲಸಿಕೆ ಹಾಕಿಸಿಕೊಂಡಿದ್ದರ ಕುರಿತು ಬಿ.ಸಿಪಾಟೀಲ್ ಪ್ರತಿಕ್ರಿಯೆ

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಇಂಥದ್ದಕ್ಕೆಲ್ಲ ಪ್ರತಿಕ್ರಿಯೆ ನೀಡ್ತಾರೆ. ಕುಮಾರಸ್ವಾಮಿ ಈ ಮಟ್ಟಕ್ಕೆ ಇಳಿದು ಪ್ರತಿಕ್ರಿಯೆ ನೀಡ್ತಾರೆ. ಅವರ ಸರ್ಕಾರ ಇದ್ದಾಗ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಮನೆಗೆ ಕರೆಸಿಕೊಂಡು ಬಿಪಿ, ಶುಗರ್ ಚೆಕ್ ಮಾಡಿಸಿಕೊಳ್ತಿರ್ಲಿಲ್ವಾ.? ಇದರಲ್ಲಿ ತಪ್ಪೇನಿದೆ ಎಂದರು.

ಇದನ್ನೂ ಓದಿ:ಮನೆಯಲ್ಲೇ ಕೋವಿಡ್​ ಲಸಿಕೆ ಹಾಕಿಸಿಕೊಂಡ ಸಚಿವ ಬಿ.ಸಿ. ಪಾಟೀಲ್

ABOUT THE AUTHOR

...view details