ಹಾವೇರಿ:ಮಹಾಮಾರಿ ಕೊರೊನಾ ವಿರುದ್ಧ ಭಾರತವು ಹೋರಾಟ ನಡೆಸಿದ್ದು, ಈಗಾಗಲೇ ದೇಶದಲ್ಲಿ ಎರಡನೇ ಹಂತದ ಲಾಕ್ಡೌನ್ ಜಾರಿಯಲ್ಲಿದೆ. ಇನ್ನು ಹಾವೇರಿಯಲ್ಲಿ ಲಾಕ್ಡೌನ್ಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಎರಡನೇ ಹಂತದ ಮೊದಲ ದಿನವಾದ ಇಂದು ಸಾರ್ವಜನಿಕರು ಸಾಮಾಜಿಕ ಅಂತರದಿಂದ ವ್ಯವಹರಿಸುತ್ತಿರುವ ದೃಶ್ಯ ಕಂಡು ಬಂತು.
ಹಾವೇರಿಯಲ್ಲಿ ಎರಡನೇ ಹಂತದ ಲಾಕ್ಡೌನ್ಗೆ ಉತ್ತಮ ರೆಸ್ಪಾನ್ಸ್ - corona updates in karnataka
ಹಾವೇರಿ ನಗರದಲ್ಲಿ ಲಾಕ್ಡೌನ್ಗೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದ್ದು, ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹಾರ ಮಾಡುತ್ತಿದ್ದಾರೆ.
ಹಾವೇರಿಯಲ್ಲಿ ಎರಡನೇ ಹಂತದ ಲಾಕ್ಡೌನ್ಗೆ ಉತ್ತಮ ರೆಸ್ಪಾನ್ಸ್
ನಗರದ ಹೋಲ್ ಸೇಲ್ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ಹಾಗೂ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ವಹಿವಾಟು ನಡೆಸಿದರು. ಮಾಸ್ಕ್ ಧರಿಸಿಕೊಂಡು ತರಕಾರಿ ಮಾರಾಟ ಮತ್ತು ಖರೀದಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಇನ್ನು ಪೊಲೀಸ್ ಸಿಬ್ಬಂದಿ ಮಾರುಕಟ್ಟೆಯಲ್ಲಿ ಸಾಮಾಜಿಕ ಅಂತರ ಉಲ್ಲಂಘನೆಯಾಗದಂತೆ ನೋಡಿಕೊಂಡರು.
Last Updated : Apr 15, 2020, 1:01 PM IST