ಕರ್ನಾಟಕ

karnataka

ETV Bharat / state

ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್​ ಡಿಕ್ಕಿ: ಮಹಿಳೆ ಗಂಭೀರ ಗಾಯ - Bike collide to a tree in road

ಬುಧವಾರ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿ ಬಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಮಹಿಳೆಗೆ ಗಂಭೀರ ಗಾಯ‌ವಾದ ಘಟನೆ ತಾಲೂಕಿನ ಗಾಂಧಿಪುರ ಗ್ರಾಮದ ಬಳಿ ನಡೆದಿದೆ.

ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್​ ಡಿಕ್ಕಿ
ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್​ ಡಿಕ್ಕಿ

By

Published : Sep 4, 2020, 2:04 AM IST

ಹಾವೇರಿ:ರಸ್ತೆಯಲ್ಲಿ ಬಿದ್ದಿದ್ದ ಮರವನ್ನು ತೆರವುಗೊಳಿಸದ ಹಿನ್ನೆಲೆ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಮಹಿಳೆಗೆ ಗಂಭೀರ ಗಾಯ‌ವಾದ ಘಟನೆ ತಾಲೂಕಿನ ಗಾಂಧಿಪುರ ಗ್ರಾಮದ ಬಳಿ ನಡೆದಿದೆ.

ಹಶ್ಮತಬಿ ರಿತ್ತಿ (42) ಗಂಭೀರವಾಗಿ ಗಾಯಗೊಂಡ ಮಹಿಳೆ. ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪತಿಯೊಂದಿಗೆ ಮಹಿಳೆ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಬೈಕ್​ ಡಿಕ್ಕಿ

ನಿನ್ನೆ ರಾತ್ರಿ ಸುರಿದ ಮಳೆಗೆ ರಸ್ತೆಯಲ್ಲಿ ಮರ ಬಿದ್ದಿದೆ. ರಸ್ತೆಯಲ್ಲಿನ ಮರ ತೆರವುಗೊಳಿಸದೆ ನಿರ್ಲಕ್ಷ್ಯ ತೋರಿದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ABOUT THE AUTHOR

...view details