ಹಾವೇರಿ: ಬೈಕ್ಗೆ ಲಾರಿ ಡಿಕ್ಕಿಯಾದ ಪರಿಣಾಮ ಶಾಲಾ ಮುಖ್ಯ ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಕರೂರು ಕ್ರಾಸ್ ಬಳಿ ಸಂಭವಿಸಿದೆ.
ಬೈಕ್-ಲಾರಿ ಮಧ್ಯೆ ಅಪಘಾತ: ಶಾಲಾ ಮುಖ್ಯೋಪಧ್ಯಾಯ ಸಾವು - ಸಾವು
ಬೈಕ್ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಶಿಕ್ಷಕರೊಬ್ಬರು ಮೃತಪಟ್ಟಿರುವ ಘಟನೆ ಹಾವೇರಿಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ಬೈಕ್ ಹಾಗೂ ಲಾರಿ ಮಧ್ಯೆ ಅಪಘಾತ
ಮೃತ ಶಿಕ್ಷಕರನ್ನ ದಾವಣಗೆರೆ ಜಿಲ್ಲೆ ಹರಪನಹಳ್ಳಿ ತಾಲೂಕು ಕಡತಿ ಗ್ರಾಮದ ಮೌನೇಶ್(58) ಎಂದು ಗುರುತಿಸಲಾಗಿದೆ. ಶಿಕ್ಷಕ ಮೌನೇಶ್ ಕರೂರು ಗ್ರಾಮದಲ್ಲಿ ಬೀರೇಶ್ವರ ಪ್ರೌಢ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತವಾಗುತ್ತಿದ್ದಂತೆ ಲಾರಿ ಚಾಲಕ ಲಾರಿ ಬಿಟ್ಟು ಪರಾರಿಯಾಗಿದ್ದಾನೆ.
ಕುಮಾರಪಟ್ಟಣಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.