ಹಾವೇರಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಬಗ್ಗೆ ವೈಯಕ್ತಿಕವಾಗಿ ನನಗೆ ಒಳ್ಳೆಯ ಗೌರವವಿದೆ. ಅವರಿಗೆ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಸಿ ಪಾಟೀಲ್ ತಿಳಿಸಿದ್ದಾರೆ.
ಹಿರೇಕೆರೂರು ತಾಲೂಕಿನ ಬೋಗಾವಿಯಲ್ಲಿ ಮಾತನಾಡಿದ ಅವರು, ಸ್ವಾಭಿಮಾನಕ್ಕೆ ಧಕ್ಕೆ ಬಂದಾಗ ಪಕ್ಷದಿಂದ ಪಕ್ಷಕ್ಕೆ ಹೋಗುವುದು ಸಹಜ. ಸಿದ್ದರಾಮಯ್ಯ ಜೆಡಿಎಸ್ನಲ್ಲಿದ್ದರು. ಅವರು ಸ್ವಾಭಿಮಾನಕ್ಕಾಗಿ ಪಕ್ಷ ಬಿಡಲಿಲ್ಲವೇ. ಹಾಗೇ ನಾವೂ ಕೂಡ. ದೇವೇಗೌಡರ ವಿರುದ್ಧ ತೊಡೆ ತಟ್ಟಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರ ಬಗ್ಗೆ ಏನೂ ಮಾತನಾಡುವುದಿಲ್ಲ. ನನಗೆ ತುಂಬಾ ಗೌರವವಿದೆ ಎಂದು ಬಣ್ಣಿಸಿದರು.