ಹಾವೇರಿ:ರಾಜ್ಯದಲ್ಲಿ ಬಿಜೆಪಿ ಬಿಟ್ಟರೆ ಬೇರೆ ಪಕ್ಷ ಸರ್ಕಾರ ರಚಿಸುವ, ಮತ್ತೊಂದು ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಮಯವೇ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೇರೆ ಪಕ್ಷ ಸರ್ಕಾರ ರಚಿಸಲ್ಲ; ಮೈತ್ರಿ ಅವಶ್ಯಕತೆಯೂ ಇಲ್ಲ, ಬಿಜೆಪಿಯೇ ಎಲ್ಲ - ಡಿಸೆಂಬರ್ 5ರಂದು ಉಪಚುನಾವಣೆ
ಬಿಜೆಪಿ ಅಭ್ಯರ್ಥಿ ಪರವಾಗಿ ಪ್ರಚಾರಕ್ಕಾಗಿ ರೋಡ್ ಶೋದಲ್ಲಿ ಭಾಗವಹಿಸಲು ಹಾವೇರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಹಾವೇರಿಯ ಹೊಸಮನಿ ಸಿದ್ದಪ್ಪ ಕ್ರೀಡಾಂಗಣದಲ್ಲಿ ಮಾತನಾಡಿದ ಅವರು, ಪ್ರತಿಪಕ್ಷದ ನಾಯಕರು ಹೇಳುವುದಕ್ಕೆಲ್ಲ ತಲೆಕೆಡಿಸಿಕೊಳ್ಳುವುದಿಲ್ಲ. ಬೇರೆ ಪಕ್ಷದವರು ಈ ಬಗ್ಗೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.
ಉಪಚುನಾವಣೆ ನಡೆಯುತ್ತಿರುವ 15 ಕ್ಷೇತ್ರಗಳಲ್ಲಿ ಈಗಾಗಲೇ ನಾನು ಗೆದ್ದಾಗಿದೆ. ಹೀಗಾಗಿ ನಾನೇ ಮೂರೂವರೆ ವರ್ಷಗಳ ಕಾಲ ಮುಖ್ಯಮಂತ್ರಿ ಆಗಿರುತ್ತೇನೆ. ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುತ್ತೇನೆ ಎಂದು ಭವಿಷ್ಯ ನುಡಿದರು.