ಹಾವೇರಿ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ಜಿಲ್ಲೆಯ ಹಿರೇಕೆರೂರಿನಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ ನಡೆಯಿತು.
ಹಾವೇರಿಯ ಹಿರೇಕೆರೂರುನಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ - ಹಿರೇಕೆರೂರಲ್ಲಿ ಬಿಜೆಪಿ ಗ್ರಾಮ ಸ್ವರಾಜ್ಯ ಸಮಾವೇಶ
ಕಾರ್ಯಕರ್ತರು ಉಳಿದ ಚುನಾವಣೆಗಳಲ್ಲಿ ನಾಯಕರಿಗಾಗಿ ಕೆಲಸ ಮಾಡುತ್ತಾರೆ. ನಾಯಕರು ಕಾರ್ಯಕರ್ತರನ್ನ ನಾಯಕರನ್ನಾಗಿ ಮಾಡುವ ಚುನಾವಣೆ ಇದು..
ಹಿರೇಕೆರೂರಿನ ಗುರುಭವನದಲ್ಲಿ ನಡೆದ ಸಮಾವೇಶಕ್ಕೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಾಯಕರು, ಗ್ರಾಮ ಪಂಚಾಯತ್ ಚುನಾವಣೆ ಕಾರ್ಯಕರ್ತರದಾಗಿದೆ. ಕಾರ್ಯಕರ್ತರು ಉಳಿದ ಚುನಾವಣೆಗಳಲ್ಲಿ ನಾಯಕರಿಗಾಗಿ ಕೆಲಸ ಮಾಡುತ್ತಾರೆ. ಆದರೆ, ಈ ಚುನಾವಣೆಯಲ್ಲಿ ನಾಯಕರು ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಚುನಾವಣೆ ಇದು ಎಂಬ ಅಭಿಪ್ರಾಯವನ್ನು ಬಿಜೆಪಿ ನಾಯಕರು ವ್ಯಕ್ತಪಡಿಸಿದರು.
ಸಮಾವೇಶದಲ್ಲಿ ಸಚಿವರಾದ ಬಿ ಸಿ ಪಾಟೀಲ್, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಶಿವಕುಮಾರ್ ಉದಾಸಿ, ಶಾಸಕರಾದ ಅರುಣಕುಮಾರ್ ಪೂಜಾರ್, ವಿರೂಪಾಕ್ಷಪ್ಪ ಬಳ್ಳಾರಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಪಾಲ್ಗೊಂಡಿದ್ದರು.