ರಾಣೆಬೆನ್ನೂರು:ಕೇಂದ್ರ ಸರ್ಕಾರವು ಸಂವಿಧಾನದ 370 ನೇ ವಿಧಿಯನ್ನು ರದ್ದು ಮಾಡಿಲ್ಲ, ಜಮ್ಮು- ಕಾಶ್ಮೀರಕ್ಕೆ ನೀಡಿದ ಸ್ಥಾನಮಾನವನ್ನು ರದ್ದು ಮಾಡಲಾಗಿದೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್ ಹೇಳಿಕೆ ನೀಡಿದರು.
ನಗರದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಐಕ್ಯತಾ ಅಭಿಯಾನದಡಿಯಲ್ಲಿ ಒಂದು ದೇಶ ಒಂದು ಸಂವಿಧಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನೆಹರೂ ಕಾಶ್ಮೀರಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಲು ಮುಂದಾಗಿದ್ದಾಗ ಡಾ.ಬಿ.ಆರ್.ಅಂಬೇಡ್ಕರ್ ಅವರು ವಿರೋಧಿಸಿದರು. ಕಾಂಗ್ರೆಸ್ ವರ್ಕಿಂಗ್ ಸಮಿತಿಯಲ್ಲಿ ಶೇಕ್ ಅಬ್ದುಲ್ ಮಂಡಿಸಿದ ಒಕ್ಕೂಟಕ್ಕೆ ಎಲ್ಲರೂ ವಿರೋಧ ಮಾಡಿದ್ದರು. ಅಂದಿನ ಉಪ ಪ್ರಧಾನಮಂತ್ರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ತಾತ್ಕಾಲಿಕ ಬದಲಾವಣೆ ಮಾಡಿ 370 ನೇ ವಿಧಿ ಎಂದು ಅಂಗೀಕಾರ ಮಾಡಿದ್ದರು. ಅಲ್ಲಿಂದ ಮುಂದೆ ಜಮ್ಮು -ಕಾಶ್ಮೀರದಲ್ಲಿ ಸ್ಥಾನಮಾನದ ಉಪಯೋಗ ಬಡ ಜನರಿಗೆ ಸಿಗದೆ ಉಳ್ಳವರ ಪಾಲಾಗಿತ್ತು. ಹೀಗಾಗಿ ಕೇಂದ್ರ ಬಿಜೆಪಿ ಸರ್ಕಾರ ಈ ದಿಟ್ಟ ಹೆಜ್ಜೆ ಇಟ್ಟಿದೆ ಎಂದರು.