ಕರ್ನಾಟಕ

karnataka

ETV Bharat / state

ಶಿವರಾಜ್ ಸಜ್ಜನ್​​​ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ.. ಹಾನಗಲ್​ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ - Shivaraj sajjan

ಹಾನಗಲ್ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಿದ್ದಂತೆ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಉದಾಸಿ ಕುಟುಂಬಸ್ಥರಿಗೆ ಟಿಕೆಟ್ ನೀಡುತ್ತಾರೆ ಎಂದುಕೊಂಡಿದ್ದ ಕಾರ್ಯಕರ್ತರಿಗೆ ನಿರಾಸೆಯಾಗಿದ್ದು, ಶಿವರಾಜ್ ಸಜ್ಜನ್​ಗೆ ಟಿಕೆಟ್ ನೀಡಿದ್ದಕ್ಕೆ ಪ್ರತಿಭಟಿಸಿದ್ದಾರೆ.

ಶಿವರಾಜ್ ಸಜ್ಜನ್​​​ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ
ಶಿವರಾಜ್ ಸಜ್ಜನ್​​​ಗೆ ಟಿಕೆಟ್ ನೀಡಿದ್ದಕ್ಕೆ ಆಕ್ರೋಶ

By

Published : Oct 7, 2021, 1:24 PM IST

ಹಾವೇರಿ: ಹಾನಗಲ್ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಯನ್ನ ಘೋಷಿಸಿದೆ. ಮಾಜಿ ಶಾಸಕ ಶಿವರಾಜ್ ಸಜ್ಜನ್​​​ಗೆ ಟಿಕೆಟ್ ನೀಡಿದ್ದಕ್ಕೆ ಸ್ಥಳೀಯ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಹಾನಗಲ್​ನಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

ಹಾನಗಲ್ ತಾಲೂಕಿನವರಿಗೆ ಟಿಕೆಟ್ ನೀಡದೆ ಹಾವೇರಿ ತಾಲೂಕಿನವರಿಗೆ ಟಿಕೆಟ್ ನೀಡಲಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ಹೊರಹಾಕಿರುವ ಕಾರ್ಯಕರ್ತರು, ಹೈಕಮಾಂಡ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಉದಾಸಿ ಕುಟುಂಬಸ್ಥರಿಗೇ ಟಿಕೆಟ್ ನೀಡಬೇಕಿತ್ತು ಎಂದು ಅಸಮಾಧಾನ ಹೊರಹಾಕಿದ್ದಾರೆ.

ಇತ್ತ ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಟೈರ್​​ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಕಿಡಿಕಾರಿದ್ದಾರೆ. ಸಿ.ಎಂ ಉದಾಸಿಯವರ ಕುಟುಂಬಕ್ಕೆ ಅಥವಾ ಹಾನಗಲ್ ಕ್ಷೇತ್ರದವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಹೈಕಮಾಂಡ್ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ:ಹಾನಗಲ್‌ಗೆ ಶಿವರಾಜ್‌ ಸಜ್ಜನ್, ಸಿಂಧಗಿಗೆ ರಮೇಶ್ ಭೂಸನೂರು: ಬೈಎಲೆಕ್ಷನ್‌ಗೆ ಬಿಜೆಪಿ ರೆಡಿ

ABOUT THE AUTHOR

...view details