ಹಾವೇರಿ:ಹಾವೇರಿಯಲ್ಲಿ ಸಂಜೀವಿನಿ ಲೈಂಗಿಕ ಅಲ್ಪಸಂಖ್ಯಾತರ ಸಂಸ್ಥೆಯು ಮೊದಲ ಬಾರಿಗೆ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಮನ ಸೆಳೆಯಿತು.
ಹಾವೇರಿಯಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಂದ ರಕ್ತದಾನ - ಲೈಂಗಿಕ ಅಲ್ಪಸಂಖ್ಯಾತರ ರಕ್ತದಾನ ಶಿಬಿರ
ಹಾವೇರಿಯಲ್ಲಿ ಸಂಜೀವಿನಿ ಲೈಂಗಿಕ ಅಲ್ಪಸಂಖ್ಯಾತರ ಸಂಸ್ಥೆಯು ಮೊದಲ ಬಾರಿಗೆ ರಕ್ತದಾನ ಶಿಬಿರ ಏರ್ಪಡಿಸುವ ಮೂಲಕ ಗಮನ ಸೆಳೆಯಿತು.
ರಕ್ತದಾನ ಶಿಬಿರ
ನಗರದ ಸಂಜೀವಿನಿ ಸಂಸ್ಥೆಯ ಆವರಣದಲ್ಲಿ ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಇತರ ಅನೇಕರು ರಕ್ತದಾನ ಮಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕದ ಸಹಯೋಗದಲ್ಲಿ ಶಿಬಿರ ಆಯೋಜನೆಗೊಂಡಿತ್ತು.
ಶಿಬಿರದಲ್ಲಿ ರಕ್ತದಾನದ ಬಗ್ಗೆ ಇರುವ ಮೂಢನಂಬಿಕೆ ತೊಲಗಿಸಿ, ರಕ್ತದಾನ ಮಾಡುವ ದಾನಿಗಳಿಗೆ ಆಗುವ ಉಪಯೋಗ ಕುರಿತು ಜಾಗೃತಿ ಮೂಡಿಸಲಾಯಿತು.