ಹಾವೇರಿ:ಕುರಿ ಮೈತೊಳೆಯಲು ಹೋದ 17 ವರ್ಷದ ಬಾಲಕ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹೊರವಲಯದಲ್ಲಿರುವ ಗುಡ್ಡದಕೆರೆಯಲ್ಲಿ ಬಾಲಕ ಬೀರಪ್ಪ ಬಣಕಾರ(17) ನೀರುಪಾಲಾಗಿದ್ದಾನೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾಲಕನ ಮೃತದೇಹದ ಶೋಧಕಾರ್ಯ ನಡೆಸಿದರು. ಆದರೆ ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ರಟ್ಟಿಹಳ್ಳಿ ಪಿಎಸ್ಐ ಕೃಷ್ಣಪ್ಪ ತೋಪಿನ ಅವರು ತಾವೇ ಕೆರೆಗೆ ಇಳಿದು ಬಾಲಕನ ಶವ ಹೊರತೆಗೆದಿದ್ದಾರೆ.