ಹಾವೇರಿ:ಮೊಬೈಲ್ ಬ್ಯಾಟರಿಯೊಂದಿಗೆ ಆಟವಾಡುತ್ತಿದ್ದ ವೇಳೆ ಬ್ಯಾಟರಿ ಸ್ಫೋಟಗೊಂಡಿದ್ದು 10 ವರ್ಷದ ಬಾಲಕ ಗಾಯಗೊಂಡಿರುವ ಘಟನೆ ಹಾವೇರಿಯ ಹುರಳಿಕುಪ್ಪಿ ಗ್ರಾಮದಲ್ಲಿ ನಡೆದಿದೆ.
ಬಾಲಕ ಕಾರ್ತಿಕ್ ಕಲಾದಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ತೀವ್ರತೆಗೆ ಬಲಗೈಯ ನಾಲ್ಕು ಬೆರಳುಗಳು ತುಂಡಾಗಿವೆ. ಈ ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸೇರಿ ಬಾಲಕನನ್ನು ಸವಣೂರು ತಾಲೂಕು ಆಸ್ಪತ್ರೆಗೆ ಸೇರಿಸಿದರು.