ಹಾವೇರಿ: ಮಾರ್ಚ್ 7, 2021ರಂದು ಮನೆಯಿಂದ ಕಾಣೆಯಾಗಿದ್ದ ಹನ್ನೊಂದು ವರ್ಷದ ಬಾಲಕನನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪ್ರಕರಣ ಸಂಬಂಧ ಪೊಲೀಸರು ರಿತೇಶ್ ಮೇಟಿ (21) ಮತ್ತು ಓರ್ವ ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳು ಬಾಲಕನನ್ನು ಅಪಹರಣ ಮಾಡಿಕೊಂಡು ಹೋಗಿ ಕೆರೆಯಲ್ಲಿ ಮುಳುಗಿಸಿ ಕೊಲೆ ಮಾಡಿದ್ದಾರೆ. ಬಳಿಕ ಕೆರೆಯಲ್ಲಿ ಶವ ತೇಲಿ ಮೇಲೆ ಬಂದ ಪೊಲೀಸರಿಗೆ ವಿಷಯ ಗೊತ್ತಾಗುತ್ತದೆ ಎಂದು ಅರಿತು ಶವವನ್ನು ಮನೆಯ ಹಿತ್ತಲಿನಲ್ಲಿ ಹೂತಿದ್ದರು. ನಂತರ ಮನೆಯ ಸಮೀಪದ ಮುಳ್ಳುಕಂಟಿ ಬೆಳೆದಿದ್ದ ಖುಲ್ಲಾ ಜಾಗದಲ್ಲಿ ಶವವನ್ನು ಅರ್ಧಂಬರ್ಧ ಸುಟ್ಟು ಆರೋಪಿಗಳು ಪರಾರಿಯಾಗಿದ್ದರು ಎನ್ನಲಾಗುತ್ತಿದೆ.