ಹಾವೇರಿ:ಮಳೆಯಿಂದ ಬಿದ್ದ ಮನೆಗೆ ಪರಿಹಾರ ಬಿಡುಗಡೆ ಮಾಡಲು ಹಣ ಪಡೆಯಲು ಮುಂದಾದ ಪಿಡಿಒ, ಈಗ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದಲ್ಲಿ ನಡೆದಿದೆ. ಶಿಗ್ಗಾಂವಿ ತಾಲೂಕಿನ ನಾರಾಯಣಪುರ ಗ್ರಾಮ ಪಂಚಾಯತ್‌ನಲ್ಲಿದ್ದ ಈರಣ್ಣ ಗಾಣಿಗಿ ಲೋಕಾಯುಕ್ತರ ಬಲೆಗೆ ಬಿದ್ದಿ ಪಿಡಿಒ ಆಗಿದ್ದಾರೆ.
ಪಂಚಾಯ್ತಿ ವ್ಯಾಪ್ತಿಯ ಮುನವಳ್ಳಿ ಗ್ರಾಮದ ಸಂಗಪ್ಪ ಎಂಬುವವರಿಂದ ಹಣ ಪಡೆಯುತ್ತಿದ್ದ ವೇಳೆ ಈರಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂಗಪ್ಪನ ಮನೆ ಕಳೆದ ಮುಂಗಾರಿನಲ್ಲಿ ಸುರಿದ ಮಳೆಗೆ ಧರೆಗುರುಳಿತ್ತು. ಈ ಹಿನ್ನೆಲೆಯಲ್ಲಿ ಮನೆಗೆ ಸರ್ಕಾರದ ಪರಿಹಾರ ಹಣ ನೀಡಲು ಸಂಗಪ್ಪ ಕೇಳಿಕೊಂಡಿದ್ದ. ಈ ಸಂದರ್ಭದಲ್ಲಿ ಈರಣ್ಣ ವರ್ಕ್ ಆರ್ಡರ್ ನೀಡಲು 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದ.