ಹಾನಗಲ್(ಹಾವೇರಿ): ಈ ಉಪಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲೆಯ ಹಾನಗಲ್‌ನಲ್ಲಿ ನಡೆದ ಬಿಜೆಪಿ ಪಕ್ಷದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಉಪಚುನಾವಣೆ ಗೆದ್ದರೆ ಹೊಸ ಅಲೆ ಆರಂಭವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉಪ ಚುನಾವಣೆ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ - ಸಚಿವ ಬಿಸಿ ಪಾಟೀಲ್ - ಹಾನಗಲ್
ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತೆ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದು, ಈ ಚುನಾವಣೆಗಳ ಫಲಿತಾಂಶ ಮುಂದಿನ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಅಂತಲೂ ಹೇಳಿದ್ದಾರೆ.
ಉಪಚುನಾವಣೆ ನಡೆಯುವ ಎರಡು ಕ್ಷೇತ್ರಗಳಲ್ಲಿ ನಾವು ಗೆದ್ದೇ ಗೆಲ್ಲಲೇಬೇಕು. ದಿವಂಗತ ಸಿ.ಎಂ.ಉದಾಸಿ ಅವರ ಆತ್ಮ ತೃಪ್ತಿಯಾಗುವ ರೀತಿಯಲ್ಲಿ ಚುನಾವಣೆಯಲ್ಲಿ ಕೆಲಸ ಮಾಡಬೇಕು. ವೈಮನಸ್ಸು ಮತ್ತು ಅಸಮಾಧಾನ ಎಲ್ಲಿಯೂ ಹೊರಗೆ ಬರಬಾರದು. ಪಕ್ಷ ಯಾರಿಗೇ ಟಿಕೆಟ್ ನೀಡಿದರು ಸಹ ಅವರ ಪರವಾಗಿ ಉಳಿದವರು ಕೆಲಸ ಮಾಡಬೇಕು ಎಂದು ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಕರೆ ನೀಡಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ್ ಕಲಕೋಟಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ, ಮಾಜಿ ಸಂಸದ ಮಂಜುನಾಥ ಕುನ್ನೂರು, ಮಾಜಿ ಶಾಸಕ ಶಿವರಾಜ್ ಸಜ್ಜನರ್ ಸೇರಿದಂತೆ ಬಿಜೆಪಿಯ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.