ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನ್ಸ್‌ಟೆಬಲ್ ಒಬ್ಬರಿಗೆ ಸೋಮವಾರ ಕೊರೊನಾ ವೈರಸ್ ದೃಢಪಟ್ಟಿದೆ. ಹೀಗಾಗಿ ಬ್ಯಾಡಗಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢ: ಬ್ಯಾಡಗಿ ಪೊಲೀಸ್ ಠಾಣೆ ಸೀಲ್‌ಡೌನ್ - Corona virus found in police
ಕಾನ್ಸ್‌ಟೆಬಲ್ ಒಬ್ಬರಿಗೆ ಸೋಮವಾರ ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ.
Police station
ಪೊಲೀಸ್ ಕಾನ್ಸ್‌ಟೆಬಲ್‌ಗೆ ಕೊರೊನಾ ಕಾಣಿಸಿದ್ದರಿಂದ ಅವರು ಕಾರ್ಯ ನಿರ್ವಹಿಸಿರುವ ಬ್ಯಾಡಗಿ ಪೊಲೀಸ್ ಸ್ಟೇಷನ್ ಅನ್ನು ಸೀಲ್ ಡೌನ್ ಮಾಡಲಾಗಿದೆ. ಈ ಮಧ್ಯೆ ಮಂಗಳವಾರ ಠಾಣೆಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಅಲ್ಲದೇ ಕಾನ್ಸ್‌ಟೆಬಲ್ ಬಳಸಿದ ಪೊಲೀಸ್ ಜೀಪ್‌ಗೂ ಸಹ ಸ್ಯಾನಿಟೈಜರ್ ಸಿಂಪಡಿಸಲಾಯಿತು.
ಠಾಣೆಯ ಪಿಎಸ್ಐ ಮಾಲತೇಶ್ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿಯನ್ನು ಈಗಾಗಲೇ ಹೋಮ್ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ.