ಹಾವೇರಿ:ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದ ಜನರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ, ಇಲ್ಲಿನ ನಾಗರಿಕರಿಗೂ, ರಾಷ್ಟ್ರೀಯ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಸ್ಪಷ್ಟಪಡಿಸಿದರು.
ನಗರದಲ್ಲಿ ಮಾತನಾಡಿದ ಅವರು ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿದರು. ಸಿದ್ದರಾಮಯ್ಯನವರು ಪೊಲೀಸರ ಮೇಲೆ ಸುಖಾಸುಮ್ಮನೆ ಅಪವಾದ ಮಾಡುವುದು ಸರಿಯಲ್ಲ ಎಂದರು. ಇನ್ನು ಇದೇ ವೇಳೆ, ಗಲಭೆಯ ವಿಡಿಯೋಗೂ, ಅಲ್ಲಿನ ಘಟನೆಗೂ ಸಂಬಂಧವಿಲ್ಲ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಗಲಭೆ ನಡೆಯುವುದನ್ನ ಮೊದಲೇ ರೆಕಾರ್ಡ್ ಮಾಡಲು ಅದೇನು ಸಿನಿಮಾ ಶೂಟಿಂಗಾ? ಎಂದು ಪ್ರಶ್ನಿಸಿದರು.