ಹಾವೇರಿ: ಜಿಲ್ಲೆಯಾದ್ಯಂತ ಲೋಕಸಭಾ ಚುನಾವಣಾ ಕಾವು ರಂಗೇರುತ್ತದೆ. ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ, ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್. ಪಾಟೀಲ್ ಸೇರಿದಂತೆ ಸ್ವತಂತ್ರ ಅಭ್ಯರ್ಥಿಗಳು ಕೂಡ ಮತಬೇಟೆ ಆರಂಭಿಸಿದ್ದಾರೆ.
ಹಾವೇರಿಯಲ್ಲಿ ರಂಗೇರಿದ ಚುನಾವಣ ಕಾವು... ಅಭ್ಯರ್ಥಿಗಳಿಂದ ಭರ್ಜರಿ ಮತಬೇಟೆ - undefined
ಬಿಸಿಲಿನ ತಾಪದಲ್ಲೂ ಸಹ ಮನೆ ಮನೆಗೆ ತೆರಳಿದ ನಾಯಕರು ತಮಗೆ ಮತಹಾಕುವಂತೆ ಮತದಾರರಲ್ಲಿ ಮನವಿ ಮಾಡಿದರು. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಪ್ರಮುಖವಾಗಿ ಹಾವೇರಿ ಜಿಲ್ಲೆಯನ್ನೇ ಹೆಚ್ಚು ಕೇಂದ್ರಿಕರಿಸಿವೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು ಅಭ್ಯರ್ಥಿಗಳು ಹೆಚ್ಚು ಪ್ರಚಾರ ಮಾಡುತ್ತಿದ್ದಾರೆ.
ಬಿಸಿಲಿನ ತಾಪದಲ್ಲಿ ಸಹ ಮನೆ ಮನೆಗೆ ತೆರಳುವ ನಾಯಕರು ತಮಗೆ ಮತಹಾಕುವಂತೆ ಮತದಾರರಲ್ಲಿ ಮನವಿ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಪ್ರಮುಖವಾಗಿ ಹಾವೇರಿ ಜಿಲ್ಲೆಯನ್ನೇ ಹೆಚ್ಚು ಕೇಂದ್ರಿಕರಿಸಿವೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಅಭ್ಯರ್ಥಿಗಳು ಈ ಜಿಲ್ಲೆಯಲ್ಲೇ ಹೆಚ್ಚು ಪ್ರಚಾರ ಕೈಗೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಹಿರೇಕೆರೂರು ಕ್ಷೇತ್ರದಲ್ಲಿ ಮತಯಾಚನೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್. ಪಾಟೀಲ್ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ಮತಯಾಚನೆ ನಡೆಸುತ್ತಿದ್ದಾರೆ.