ಕರ್ನಾಟಕ

karnataka

ETV Bharat / state

ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ವರುಣ್ ಸಿಂಗ್​​ಗೆ ತಜ್ಞ ವೈದ್ಯರಿಂದ ಚಿಕಿತ್ಸೆ: ಸಿಎಂ ಬೊಮ್ಮಾಯಿ - ಹಾವೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

CM Bommai
ಸಿಎಂ ಬೊಮ್ಮಾಯಿ

By

Published : Dec 10, 2021, 4:13 PM IST

Updated : Dec 10, 2021, 4:26 PM IST

ಹಾವೇರಿ: ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ ಬದುಕುಳಿದ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಭೇಟಿ ಮಾಡಿದ್ದೇನೆ. ಬೆಂಗಳೂರಿನ ಕಮಾಂಡ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ಅವರಿಗೆ ಅತ್ಯುತ್ತಮ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿಯಲ್ಲಿ ವಿಧಾನ ಪರಿಷತ್​ ಚುನಾವಣೆಗೆ ಮತದಾನ ಮಾಡಿ ಮಾತನಾಡಿದ ಸಿಎಂ ಬೊಮ್ಮಾಯಿ, ವರುಣ್ ಸಿಂಗ್ ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದರು.

ಇದನ್ನೂ ಓದಿ: ವರುಣ್​ ಸಿಂಗ್​ಗೆ ಬೆಂಗಳೂರಿನಲ್ಲಿ ಚಿಕಿತ್ಸೆ.. ಆಸ್ಪತ್ರೆಗೆ ರಾಜ್ಯಪಾಲ ಗೆಹ್ಲೋಟ್,​ ಸಿಎಂ ಬೊಮ್ಮಾಯಿ ಭೇಟಿ

ವಿಕೃತ ಮನಸುಗಳಿಗೆ ಸಿಎಂ ಖಡಕ್​ ಎಚ್ಚರಿಕೆ

ಸೇನಾಪಡೆಗಳ ಮುಖ್ಯಸ್ಥ ಬಿಪಿನ್​ ರಾವತ್​ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.

Last Updated : Dec 10, 2021, 4:26 PM IST

ABOUT THE AUTHOR

...view details