ಹಾನಗಲ್: ರಸ್ತೆ ಪಕ್ಕದಲ್ಲಿದ್ದ ಕಲ್ಲಿಗೆ ಡಿಕ್ಕಿ ಹೊಡೆದ ಕಾರು ನಂತರ ಪಕ್ಕದ ಅಂಗಡಿಗೆ ನುಗ್ಗಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.
ರಸ್ತೆಬದಿಯ ಅಂಗಡಿಗೆ ನುಗ್ಗಿದ ಕಾರು: ವೃದ್ಧೆ ಸಾವು - ಕಾರು
ಕಾರು ಕಲ್ಲಿಗೆ ಡಿಕ್ಕಿ ಹೊಡೆದ ಅಂಗಡಿಗೆ ನುಗ್ಗಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ವೃದ್ಧೆ ಮೃತಪಟ್ಟಿದ್ದಾರೆ.
ಕಾರು ಅಪಘಾತ
ಘಟನೆಯಲ್ಲಿ ಕಾರಿನಲ್ಲಿದ್ದ ವೃದ್ಧೆ ಮೃತಪಟ್ಟಿದ್ದು, ಕಾರು ಚಾಲಕ ಹಾಗೂ ಅಂಗಡಿಯಲ್ಲಿ ನಿಂತಿದ್ದ ನಾಲ್ವರು ಸೇರಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತರನ್ನ ಉಮಾ ಹೆಗಡೆ (73) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ಕಾರು ಅಕ್ಕಿಆಲೂರು ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.