ಕರ್ನಾಟಕ

karnataka

ETV Bharat / state

ಹಾವೇರಿ : ಜಮೀನಿನಲ್ಲಿದ್ದವರಿಗೆ ಗುದ್ದಿದ ಕಾರು.. ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ - ಕಾರು ಗುದ್ದಿ ಮೂವರು ಸಾವು

ತೀವ್ರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕೆರೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

ಕಾರು ಅಪಘಾತ
ಕಾರು ಅಪಘಾತ

By

Published : Feb 15, 2022, 1:34 PM IST

Updated : Feb 15, 2022, 1:54 PM IST

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಮೂವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ಘಟನೆ ನಡೆದಿದೆ. ಮೃತರನ್ನ ಪ್ರಕಾಶ (45), ಶಾಲಿನಿ (10) ಮತ್ತು ಯಶೋಧಾ (8) ಎಂದು ಗುರುತಿಸಲಾಗಿದೆ.

ಯಶೋಧಾ ಮತ್ತು ಶಾಲಿನಿ ಜಮೀನಿನಲ್ಲಿ ಕುಳಿತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಮಕ್ಕಳಿಗೆ ಡಿಕ್ಕಿ ಹೊಡೆದಿದೆ. ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.

ಜಮೀನಿನಲ್ಲಿದ್ದವರಿಗೆ ಗುದ್ದಿದ ಕಾರು.. ಇಬ್ಬರು ಮಕ್ಕಳು ಸೇರಿ ಮೂವರ ದುರ್ಮರಣ

ತೀವ್ರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕೆರೂರು ತಾಲೂಕಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Last Updated : Feb 15, 2022, 1:54 PM IST

ABOUT THE AUTHOR

...view details