ಹಾವೇರಿ: ಡಿವೈಡರ್‌ಗೆ ಕಾರೊಂದು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಹಾವೇರಿ ನಗರದ ಹೊರವಲಯದಲ್ಲಿ ನಡೆದಿದೆ.
ಡಿವೈಡರ್‌ಗೆ ಕಾರು ಡಿಕ್ಕಿ: ಇಬ್ಬರಿಗೆ ಗಾಯ, ಓರ್ವ ಸಾವು - car accident haveri
ಹಾವೇರಿ ನಗರದ ಹೊರವಲಯದಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಕಾರು ಅಪಘಾತ
ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು.
ಮೃತನನ್ನು ಬೆಂಗಳೂರು ಮೂಲದ 39 ವರ್ಷದ ನದೀಮ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಸುನೀಲ್ (30) ಮತ್ತು ಮಂಜುನಾಥ್ (31)ರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಮುಂಜಾನೆ ವೇಳೆ ಹುಬ್ಬಳ್ಳಿಯಿಂದ ಬೆಂಗಳೂರಿಗೆ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಾಗುತ್ತಿದ ಕಾರು ರಸ್ತೆಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಹಾವೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.