ಹಾವೇರಿ: ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕುಳೇನೂರು ಕ್ರಾಸ್ನಲ್ಲಿ ನಡೆದಿದೆ.
ಹಾವೇರಿ: ಬೈಕ್ಗೆ ಕಾರು ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ - Two injured as car collides with bike
ಬೈಕ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.
ಬೈಕ್ಗೆ ಕಾರು ಡಿಕ್ಕಿ
ಗಾಯಾಳುಗಳನ್ನು ಚಿಕ್ಕಹುಲ್ಲಾಳ ಗ್ರಾಮದ ಸುರೇಶ ತಿಮ್ಮಣ್ಣವರ ಹಾಗೂ ಉಡಚಪ್ಪ ದೊಡ್ಡಮನಿ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್ ಸವಾರರನ್ನು ಸ್ಥಳೀಯರು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಸಂಬಂಧ ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.