ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು : ಸ್ಥಳದಲ್ಲೇ ಇಬ್ಬರು ಸಾವು - ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು

12:16 December 21
ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಹಾವೇರಿ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಮೂಡೂರು ಕ್ರಾಸ್ನಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಪಾಟೀಲ (25) ಮತ್ತು ಮಲ್ಲಿಕಾರ್ಜುನ (31) ಮೃತರು. ಇವರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನವರಾಗಿದ್ದಾರೆ. ಘಟನಾ ಸ್ಥಳಕ್ಕೆ ಪಿಎಸ್ಐ ಶ್ರೀಶೈಲ ಪಟ್ಟಣಶೆಟ್ಟಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.
ಘಟನಾ ಸಂಬಂಧ ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.