ಕರ್ನಾಟಕ

karnataka

ETV Bharat / state

ನೆರೆಗೆ ಸಹಕಾರ ನೀಡಲು ಕೇಂದ್ರ ಸರ್ಕಾರವು ಸಿದ್ಧ: ಸಚಿವ ಜೋಶಿ - minister prahlad joshi

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಪ್ರಹ್ಲಾದ್​ ಜೋಶಿ

By

Published : Aug 12, 2019, 11:12 PM IST

ಹಾವೇರಿ:ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಹಾಯ, ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ಜಿಲ್ಲೆಯ ಶಿಗ್ಗಾಂವಿಯಲ್ಲಿ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ,ಮುಖ್ಯಮಂತ್ರಿಗಳು ಹಾಗೂ ಮುಖ್ಯ ಕಾರ್ಯದರ್ಶಿಗಳು ಕೇಂದ್ರದಿಂದ ಏನೆಲ್ಲಾ ಸಹಕಾರ ಬೇಕು ಎಂಬ ಬಗ್ಗೆ ಪ್ರತಿದಿನ ಮಾಹಿತಿ ನೀಡುತ್ತಿದ್ದಾರೆ. ಮುಖ್ಯ ಕಾರ್ಯದರ್ಶಿಗಳು ಪ್ರತಿದಿನ ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ. ಅಗತ್ಯತೆಗಳನ್ನೆಲ್ಲ ಪೂರೈಸಲು ಕೇಂದ್ರ ಗೃಹ ಸಚಿವರು ಸೂಚಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದರು.

ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ

ಮಹಾರಾಷ್ಟ್ರ ಸೇರಿದಂತೆ ರಾಷ್ಟ್ರದ ಹಲವು ರಾಜ್ಯಗಳಲ್ಲಿ ಭೀಕರ ನೆರೆ ಇದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ. ರಾಷ್ಟ್ರದಲ್ಲೇ ನೆರೆ ಇರುವುದರಿಂದ ಆಯಾ ರಾಜ್ಯಗಳಿಂದ ಬರುವ ಬೇಡಿಕೆ ಪೂರೈಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸಂಪುಟ ರಚನೆ ಆಗದೇ ಇರುವುದರಿಂದ ರಾಜ್ಯದಲ್ಲಿ ಯಡಿಯೂರಪ್ಪನವರದ್ದು ಒನ್​ ಶೋ ಆದಂತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒನ್​ ಮ್ಯಾನ್​ ಆದರೂ ಕೂಡ ಅವರು ತಮ್ಮ ಕಾರ್ಯ ನಿರ್ವಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಜಕೀಯ ಒತ್ತಡ ಹಿನ್ನೆಲೆಯಲ್ಲಿ ಸಂಪುಟ ರಚನೆ ವಿಳಂಬವಾಗಿದೆ. ಶೀಘ್ರದಲ್ಲೇ ರಚನೆ ಆಗಲಿದೆ ಎಂದು ತಿಳಿಸಿದರು.

ABOUT THE AUTHOR

...view details