ಕರ್ನಾಟಕ

karnataka

By

Published : Jul 30, 2020, 2:30 PM IST

ETV Bharat / state

ಹಾವೇರಿ: ಕೋವಿಡ್​ನ ಎಲ್ಲ​ ನಿಯಮ ಪಾಲನೆಯೊಂದಿಗೆ ಸಿಇಟಿ ಬರೆದ ವಿದ್ಯಾರ್ಥಿಗಳು

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮುನ್ನ ನೀರಿನಲ್ಲಿ ಕೈ ತೊಳೆದುಕೊಂಡು ನಂತರ ಸ್ಯಾನಿಟೈಸ್​ ಮಾಡಿಕೊಂಡು ಪರೀಕ್ಷಾ ಕೊಠಡಿಗೆ ತೆರಳಿ ಪರೀಕ್ಷೆ ಬರೆದರು.

CET exam
ಹಾವೇರಿ

ಹಾವೇರಿ:ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಇಂದು ನಡೆಯಿತು. ಜಿಲ್ಲೆಯಲ್ಲಿ 3,360 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.

ಹಾವೇರಿಯಲ್ಲಿ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು - ಪರೀಕ್ಷೆ ಆರಂಭಕ್ಕೂ ಮುಂಚಿನ ವಿಡಿಯೋ ಇದು

ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತಗೆದುಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಪರೀಕ್ಷೆ ಬರೆಯುವ ಮುನ್ನ ನೀರಿನಲ್ಲಿ ಕೈ ತೊಳೆದುಕೊಂಡು ನಂತರ ಸ್ಯಾನಿಟೈಸ್​​ ಮಾಡಿಕೊಂಡು ಪರೀಕ್ಷೆಯನ್ನು ಬರೆದರು. ಬಳಿಕ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರತಿಯೊಬ್ಬರ ದೇಹದ ಉಷ್ಣಾಂಶವನ್ನು ದಾಖಲು ಮಾಡಿಕೊಳ್ಳಲಾಯಿತು.

ಅಲ್ಲದೇ ಸಾಮಾಜಿಕ ಅಂತರ ಬಾಕ್ಸ್ ಹಾಕಲಾಗಿದ್ದು, ವಿದ್ಯಾರ್ಥಿಗಳು ಬಾಕ್ಸ್‌ಗಳಲ್ಲಿ ಸರತಿಯಲ್ಲಿ ನಿಂತು ಪರೀಕ್ಷಾ ಕೇಂದ್ರಕ್ಕೆ ತೆರಳಿ ಪರೀಕ್ಷೆ ಬರೆದರು. ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿತ್ತು.

ABOUT THE AUTHOR

...view details