ಹಾವೇರಿ :ಬೆಂಗಳೂರಿನ ಜೆಜೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಯುವಕ ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ. ಸ್ವತಂತ್ರವಾಗಿ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ : ಸಿಎಂ ಬೊಮ್ಮಾಯಿ - ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಸ್ವತಂತ್ರವಾಗಿ ತನಿಖೆ ನಡೆಯಲಿ ಎಂಬ ಉದ್ದೇಶದಿಂದ ಯುವಕ ಚಂದ್ರು ಹತ್ಯೆ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಹಾವೇರಿಯಲ್ಲಿ ಸಿಎಂ ಹೇಳಿದ್ದಾರೆ..
ಹಾವೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ ಪಟ್ಟಣದ ಹೆಲಿಪ್ಯಾಡ್ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಉಚಿತವಾಗಿ ಬೂಸ್ಟರ್ ಡೋಸ್ ನೀಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರಿಗೆ ಕೊಡಬೇಕು, ಎಷ್ಟು ಅಂತರದಲ್ಲಿ ಕೊಡಬೇಕು ಎಂಬುದರ ಬಗ್ಗೆ ಆರೋಗ್ಯ ಸಚಿವರು ಗಮನಿಸಲಿದ್ದಾರೆ. ಆ ಸಂದರ್ಭದಲ್ಲೇ ಉಚಿತವಾಗಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಇದನ್ನೂ ಓದಿ:ಹಿಂದೂಯೇತರ ಅಂಗಡಿ ತೆರವು : ನಬೀಸಾಬ್ ಕುಟುಂಬಕ್ಕೆ ಮಾಜಿ ಸಿಎಂ ಹೆಚ್ಡಿಕೆ ನೆರವು