ಹಾವೇರಿ:ಜಿಲ್ಲೆಯಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಹಿರೇಕೆರೂರಿನಲ್ಲಿ 2 ಕೆರೆಗಳಿಗೆ ನೀರು ತುಂಬುವ ಯೋಜನೆಯನ್ನು ಉದ್ಘಾಟನೆ ಮಾಡಿದ್ದೇವೆ. ಇದರ ಜೊತೆಗೆ ಇನ್ನು ಅನೇಕ ಅಭಿವೃದ್ಧಿ ಯೋಜನೆ ಘೋಷಣೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಿರೇಕೆರೂರಿನ ಬಸರಿಕಟ್ಟಿ ಹೆಲಿಪ್ಯಾಡ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿರೇಕೆರೂರು, ರಟ್ಟೆಹಳ್ಳಿ ಹಾಗೂ ರಾಣೇಬೆನ್ನೂರಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಹಾವೇರಿಯಲ್ಲಿ ಮೆಗಾ ಡೈರಿ ಸಂಸ್ಕಾರಣ ಘಟಕಕ್ಕೆ ಅಡಿಗಲ್ಲು ಹಾಕಿದ್ದೇವೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕೆರೆ ತುಂಬಿಸುವ ಯೋಜನೆಗಳನ್ನು ಮಾಡಲಿದ್ದೇವೆ ಎಂದರು.
ಅಕ್ಟೋಬರ್ 01ರಿಂದ ಹೊಸ ಶಿಕ್ಷಣ ನೀತಿ ಜಾರಿ:
ಉನ್ನತ ಶಿಕ್ಷಣದಲ್ಲಿ ಹೊಸ ಶಿಕ್ಷಣ ನೀತಿ ಜಾರಿ ಕುರಿತಂತೆ ಮಾತನಾಡಿ, ಕೆಲವೆ ತಿಂಗಳಲ್ಲಿ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು. ನೀತಿಯ ಬಗ್ಗೆ ಅಧ್ಯಯನ ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಯನ್ನು ರಚನೆ ಮಾಡಿದ್ದೇವೆ. ನೀತಿಯನ್ನು ಜಾರಿಗೆ ತರಲು ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಈ ಸಮಿತಿಗಳ ವರದಿ ಆಧಾರದ ಮೇಲೆ ಅ.01 ರಿಂದ ಹೊಸ ಶಿಕ್ಷಣ ನೀತಿ ಆರಂಭವಾಲಿದೆ ಎಂದರು.
ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಲ್ಲ: