ಹಾವೇರಿ: ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸದಿಂದ ರಾಜ್ಯಾದ್ಯಂತ ಜನಸಂಕಲ್ಪ ಯಾತ್ರೆ ಮಾಡ್ತಿದ್ದೇವೆ. ಜನರ ಉತ್ಸಾಹ ಇಮ್ಮಡಿ ಆಗಿದೆ. ಜನರು ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಹಾವೇರಿ ಜಿಲ್ಲೆ ಮೋಟೆಬೆನ್ನೂರಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಂದ ಬೆಂಬಲ ಸಿಗ್ತಿದೆ ಎಂದು ತಿಳಿಸಿದರು. ಜನಸಂಕಲ್ಪ ಯಾತ್ರೆ ಕುರಿತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ಹೇಳಿದ್ದು ಯಾವುದೂ ಆಗೋದಿಲ್ಲ ಎಂದು ಅಭಿಪ್ರಾಯಪಟ್ಟರು.
ಅವರಪ್ಪನಾಣೆಗೆ ಯಡಿಯೂರಪ್ಪ ಸಿಎಂ ಆಗೋದಿಲ್ಲ ಅಂದಿದ್ರು, ಆದರೆ ಸಿಎಂ ಆದರು. ಅವರು ಜನಾಶೀರ್ವಾದ ಯಾತ್ರೆ ಮಾಡಿದ್ದರು.
ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ ಎಂದು ಬೊಮ್ಮಾಯಿ ತಿಳಿಸಿದರು.