ಹಾವೇರಿ :ಶಿವಾಜಿ ಮಹಾರಾಜ್, ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಇವರೆಲ್ಲರೂ ದೇಶಭಕ್ತರು. ಇವರು ಭಾಷೆ, ಸಮುದಾಯ ಎಲ್ಲವನ್ನು ಮೀರಿ ಬೆಳೆದವರು. ಅವರ ಹೆಸರಿನಲ್ಲಿ ನಾವೆಲ್ಲರೂ ಒಗ್ಗಾಟ್ಟಾಗಿರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹಾನ್ ನಾಯಕರಿಗೆ ಅಪಮಾನ ಮಾಡಿದವರನ್ನ ಸುಮ್ಮನೆ ಬಿಡಲ್ಲ : ಸಿಎಂ ಬೊಮ್ಮಾಯಿ
CM Bommai reaction on Belagavi riot: ಶಿವಾಜಿ ಪ್ರತಿಮೆಗೆ ಅವಮಾನ ಮಾಡಿರುವ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ ಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ಸರ್ಕಾರ ಈ ವಿಷಯವನ್ನ ಗಂಭೀರವಾಗಿ ತಗೆದುಕೊಂಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಿಲ್ಲೆ ಶಿಗ್ಗಾವಿಯಲ್ಲಿ ಪಂಚಮಸಾಲಿ ಸಮುದಾಯದ ಸಭಾಭವನದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಈಗ ನಡಿತಿರೋ ಗೊಂದಲದ ಬಗ್ಗೆ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದವರು ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿಮಾಡಿದವರನ್ನು ಈಗಾಗಲೇ ಬಂಧಿಸಲಾಗಿದೆ. ಸರ್ಕಾರ ಈ ವಿಷಯವನ್ನ ಗಂಭೀರವಾಗಿ ತೆಗೆದುಕೊಂಡಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವದಾಗಿ ಸಿಎಂ ತಿಳಿಸಿದರು.
ಪ್ರತಿಮೆ ಹಾನಿ ಸಿಎಂ ಬೊಮ್ಮಾಯಿ ಹೇಳಿಕೆ : ಕಾನೂನು ಸುವ್ಯವಸ್ಥೆ ಕಾಪಾಡುವದು ನಮ್ಮ ಕರ್ತವ್ಯ, ಆ ಕೆಲಸವನ್ನು ನಾವು ಮಾಡ್ತೇವಿ. ಈ ಘಟನೆಗಳ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ನಡೆಸುತ್ತೇವೆ. ಶಿವಾಜಿ ಪ್ರತಿಮೆಗೆ ಮಸಿ ಬಳಿದಿರುವ ವಿಚಾರವಾಗಿ ಪ್ರಧಾನಿಗೆ ಸಿಎಂ ಉದ್ಧವ್ ಠಾಕ್ರೆ ಪತ್ರ ಬರೆದ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಕುರಿತಂತೆ ತಿಳಿದು ಅದಕ್ಕೆ ಉತ್ತರಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.