ಕರ್ನಾಟಕ

karnataka

ETV Bharat / state

ನಾಳೆ ಹಾವೇರಿಗೆ ಸಿಎಂ ಬಿಎಸ್​ವೈ ಭೇಟಿ: ಏತ ನೀರಾವರಿ ಯೋಜನೆಗೆ ಚಾಲನೆ - CM BSY visit Haveri

ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ನಾಳೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಹಾನಗಲ್ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ ನೀಡಲಿದ್ದಾರೆ.

CM BSY visit Haveri
ಸಿಎಂ.ಬಿ.ಎಸ್​ ಯಡಿಯೂರಪ್ಪ

By

Published : Feb 23, 2020, 7:23 PM IST

ಹಾವೇರಿ:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನಾಳೆ ಹಾವೇರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಹಾನಗಲ್ ತಾಲೂಕಿನ ಬಾಳಂಬೀಡ ಗ್ರಾಮದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆಯುವ ತಾಲೂಕಿನ ಬಾಳಂಬೀಡ ಮತ್ತು ಹಿರೇಕಾಂಶಿ ಏತ ನೀರಾವರಿ ಯೋಜನೆಗೆ ಅವರು ಚಾಲನೆ ನೀಡಲಿದ್ದಾರೆ. ವರದಾ ನದಿಯಿಂದ ಸುಮಾರು 200 ಕೆರೆಗಳಿಗೆ ಈ ಯೋಜನೆ ನೀರು ತುಂಬಿಸಲಿದೆ.

ಸಿಎಂ ಭೇಟಿ ಹಿನ್ನೆಲೆ.. ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ
ಸಿಎಂ ಭೇಟಿ ಹಿನ್ನೆಲೆ.. ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ

ಮಧ್ಯಾಹ್ನ ಎರಡೂವರೆಗೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಸಿಎಂ ಹೆಲಿಕಾಪ್ಟರ್ ಮೂಲಕ ಅಕ್ಕಿಆಲೂರು ಹೆಲಿಪ್ಯಾಡ್​ಗೆ ಆಗಮಿಸಲಿದ್ದಾರೆ. ನಂತರ ಬಾಳಂಬೀಡ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಜೊತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ ಬಿ.ಸಿ. ಪಾಟೀಲ್​ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.

ಸಿಎಂ ಭೇಟಿ ಹಿನ್ನೆಲೆ ಬಾಳಂಬೀಡ ಗ್ರಾಮದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದೆ. ಕಾರ್ಯಕ್ರಮದ ನಂತರ ಮಧ್ಯಾಹ್ನ ಮೂರುವರೆಗೆ ಸಿ.ಎಂ. ಯಡಿಯೂರಪ್ಪ ಹೆಲಿಕಾಪ್ಟರ್ ಮೂಲಕ ತಮ್ಮ ತವರು ಕ್ಷೇತ್ರ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದಾರೆ.

ABOUT THE AUTHOR

...view details