ಹಾವೇರಿ :ಲಸಿಕಾ ಕೇಂದ್ರಕ್ಕೆ ಬರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದೆಂಬ ಉದ್ದೇಶಕ್ಕೆ ನಗರದ ಜಿಲ್ಲಾಸ್ಪತ್ರೆಯಲ್ಲಿ ವ್ಯಾಕ್ಸಿನ್ ಸೆಂಟರ್ನ ರದ್ದುಪಡಿಸಲಾಗಿದೆ.
ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಈ ಹಿನ್ನೆಲೆ ಜಿಲ್ಲಾಸ್ಪತ್ರೆಯನ್ನ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿದೆ.
ಲಸಿಕಾ ಕೇಂದ್ರಕ್ಕೆ ಬರುವ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಕಾರಣಕ್ಕೆ ಲಸಿಕಾ ಕೇಂದ್ರ ರದ್ದುಪಡಿಸಲಾಗಿದೆ ಎನ್ನಲಾಗಿದೆ.