ಕರ್ನಾಟಕ

karnataka

ETV Bharat / state

ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ - Haveri latest news

ಕೂಡಲೇ ಮಸೂದೆಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನಿಂದ ಉಗ್ರ ಪ್ರತಿಭಟನೆ..

Congress protest
Congress protest

By

Published : Oct 2, 2020, 8:18 PM IST

ಹಾವೇರಿ :ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತವಿರೋಧಿ ನೀತಿ ಅನುಸರಿಸುತ್ತಿವೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು. ನಗರದ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ನಂತರ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಉಭಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರಗಳು ರೈತ, ಕಾರ್ಮಿಕ, ಜನವಿರೋಧಿ ಮಸೂದೆಗಳನ್ನು ಜಾರಿಗೆ ತರಲು ಹೊರಟಿವೆ.

ಕೂಡಲೇ ಮಸೂದೆಗಳನ್ನು ವಾಪಸ್ ಪಡೆಯಬೇಕು. ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಉಗ್ರ ಪ್ರತಿಭಟನೆಗೆ ಮುಂದಾಗಲಿದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಂ ಎಂ ಹಿರೇಮಠ, ಮಾಜಿ ಸಚಿವ ರುದ್ರಪ್ಪ ಲಮಾಣಿ ಸೇರಿ ವಿವಿಧ ಮುಖಂಡರು ಉಪಸ್ಥಿತರಿದ್ದರು.

ABOUT THE AUTHOR

...view details