ಹಾವೇರಿ: ಜಿಲ್ಲೆಯ ಹಾನಗಲ್ ವಿಧಾನಸಭೆಯ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಇಂದು ನಾಮಪತ್ರ ಸಲ್ಲಿಸಿದರು.
ಹಾನಗಲ್ ಉಪಚುನಾವಣೆ: ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಸಿದ ಶ್ರೀನಿವಾಸ ಮಾನೆ - ಹಾನಗಲ್ ವಿಧಾನಸಭೆ ಉಪಚುನಾವಣೆ
ಸಿಎಂ ಉದಾಸಿ ಮರಣಾನಂತರ ತೆರವಾಗಿರುವ ಹಾನಗಲ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ ಮಾನೆ ಇಂದು ನಾಮಪತ್ರ ಸಲ್ಲಿಸಿದರು.
ಹಾನಗಲ್ ಉಪಚುನಾವಣೆ
ಮಾನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಮುಖಂಡರಾದ ಎಚ್. ಕೆ. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಸೇರಿದಂತೆ ಮುಖಂಡರು ಸಾಥ್ ನೀಡಿದರು.
ಶ್ರೀನಿವಾಸ್ ಮನೆ ನಾಮಪತ್ರದ ನಾಲ್ಕು ಪ್ರತಿಗಳನ್ನು ಸಲ್ಲಿಸಿದ್ದಾರೆ. ಪ್ರತಿ ಒಂದು ನಾಮಪತ್ರ ಸಲ್ಲಿಸುವಾಗ ಇಬ್ಬರು ಕಾಂಗ್ರೆಸ್ ಮುಖಂಡರು ಸೂಚಕರಾಗಿ ಪಾಲ್ಗೊಂಡಿದ್ದರು. ಚುನಾವಣಾ ಅಧಿಕಾರಿ ಅಶೋಕ್ ತೇಲಿಗೆ ಮಾನೆ ನಾಮಪತ್ರ ಸಲ್ಲಿಸಿದರು.