ರಾಣೆಬೆನ್ನೂರ: ನಗರ ಗ್ರಾಮೀಣ ಸಮಿತಿ ವತಿಯಿಂದ ತಾಲೂಕು ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ಅ.25 ರಂದು ನಡೆಯಲಿದೆ ಎಂದು ಮಾಜಿ ಶಾಸಕ ಕೆ ಬಿ ಕೋಳಿವಾಡ ತಿಳಿಸಿದರು.
ಅ.25ಕ್ಕೆ ರಾಣೇಬೆನ್ನೂರಿನಲ್ಲಿ ಒಂದೇ ವೇದಿಕೆಯಲ್ಲಿರ್ತಾರಂತೆ ಕೋಳಿವಾಡ-ಸಿದ್ದರಾಮಯ್ಯ.. - ಅ.25ಕ್ಕೆ ರಾಣೆಬೆನ್ನೂರಲ್ಲಿ ಬೃಹತ್ ಕಾಂಗ್ರೆಸ್ ಸಮಾವೇಶ
ಅ.25 ರಂದು ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ಬೃಹತ್ ಸಮಾವೇಶವನ್ನು ನಗರದ ಆಂಗ್ಲೋ ಉರ್ದು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಕೆ ಬಿ ಕೋಳಿವಾಡ ತಿಳಿಸಿದರು.
ನಗರದಲ್ಲಿ ಮಾಧ್ಯಮದವರ ಜೊತೆ ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಸಂಘಟನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ನಗರದ ಆಂಗ್ಲೋ ಉರ್ದು ಮೈದಾನದಲ್ಲಿ ಆಯೋಜಿಸಲಾಗಿದೆ.
ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಎಸ್ ಆರ್ ಪಾಟೀಲ, ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವರಾದ ಹೆಚ್ ಕೆ ಪಾಟೀಲ, ಶಾಮನೂರು ಶಿವಶಂಕ್ರಪ್ಪ, ಸಿ ಎಂ ಇಬ್ರಾಹಿಂ, ಸತೀಶ ಜಾರಕಿಹೊಳಿ, ಸಲೀಂ ಅಹ್ಮದ್ ಸೇರಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.