ಕರ್ನಾಟಕ

karnataka

ETV Bharat / state

ಕಾಂಗ್ರೆಸ್​​ ಬಂಡಾಯ ಅಭ್ಯರ್ಥಿ ಎ.ಎಂ.ನಾಯ್ಕ್ ನಾಮಪತ್ರ ತಿರಸ್ಕೃತ - ಎ.ಎಮ್.ನಾಯ್ಕ್ ನಾಮಪತ್ರ ತಿರಸ್ಕಾರ

ರಾಣೆಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎ.ಎಂಮ್.ನಾಯ್ಕ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿ ಎ.ಎಮ್.ನಾಯ್ಕ್

By

Published : Nov 19, 2019, 7:45 PM IST

ಹಾವೇರಿ: ರಾಣೆಬೆನ್ನೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎ.ಎಂ.ನಾಯ್ಕ್ ಅವರ ನಾಮಪತ್ರ ತಿರಸ್ಕೃತವಾಗಿದೆ.

ನಿನ್ನೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಬಂಡಾಯ ಅಭ್ಯರ್ಥಿಯಾಗಿ ಎ.ಎಂ.ನಾಯ್ಕ್ ನಾಮಪತ್ರ ಸಲ್ಲಿಸಿದ್ದರು. ನಾಯ್ಕ್ ಅವರು 'ಬಿ' ಫಾರಂ ನೀಡದೆ ನಾಮಪತ್ರ ಸಲ್ಲಿಸಿದ್ದು, ಇಂದು ನಾಮಪತ್ರ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಬಿ‌ ಫಾರಂ ಇಲ್ಲದೆ ಇರುವದರಿಂದ ಚುನಾವಣಾಧಿಕಾರಿ ಎ.ದೇವರಾಜ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ.

ರಾಣೆಬೆನ್ನೂರು ಕ್ಷೇತ್ರದ ಉಪ ಚುನಾವಣೆಗೆ ಒಟ್ಟು 14 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಈಗ ಒಬ್ಬ ಅಭ್ಯರ್ಥಿ ನಾಮಪತ್ರ ತಿರಸ್ಕಾರವಾದ ಹಿನ್ನೆಲೆಯಲ್ಲಿ ಸದ್ಯ ಕಣದಲ್ಲಿ 13 ಅಭ್ಯರ್ಥಿಗಳು ಉಳಿದಂತಾಗಿದೆ.

ABOUT THE AUTHOR

...view details