ಹಾವೇರಿ :ಮಾನವೀಯತೆ ಮರೆತು ಬಸ್ ನಿಲ್ದಾಣದಲ್ಲಿ ಮೃತದೇಹ ಇಟ್ಟು ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಕೊರೊನಾ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಬಸ್ ನಿಲ್ದಾಣದಲ್ಲಿ ಮೃತದೇಹ ಇಟ್ಟ ಪ್ರಕರಣ.. ಸಾವನ್ನಪ್ಪಿದ್ದ ವ್ಯಕ್ತಿಗೆ ಇರಲಿಲ್ಲ ಕೊರೊನಾ - ಹಾವೇರಿ ಜಿಲ್ಲೆಯಲ್ಲಿ ಕೊರೊನಾ ಪ್ರಕರಣ
ಕೆಲ ಸಮಯದ ನಂತರ ಮೃತದೇಹವನ್ನು ಸರ್ಕಾರದ ಎಸ್ಒಪಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಲು ಡಿಹೆಚ್ಒಗೆ ಸೂಚಿಸಲಾಗಿತ್ತು. ಈಗ ಮೃತನ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಾಹಿತಿ ನೀಡಿದ್ದಾರೆ..

ಬಸ್ ನಿಲ್ದಾಣದಲ್ಲಿ ಮೃತದೇಹ ಇಟ್ಟ ಪ್ರಕರಣ
ಬಸ್ ನಿಲ್ದಾಣದಲ್ಲಿ ಮೃತದೇಹ ಇಟ್ಟ ಪ್ರಕರಣ
ಜಿಲ್ಲೆಯ ರಾಣೇಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆ ಮುಂಭಾಗದ ಬಸ್ ನಿಲ್ದಾಣದಲ್ಲಿ ನಿನ್ನೆ ಮೃತದೇಹ ಬಿಟ್ಟಿದ್ದ ಆಸ್ಪತ್ರೆ ಸಿಬ್ಬಂದಿ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ರಸ್ತೆಗೆ ಹೊಂದಿಕೊಂಡಂತಿದ್ದ ಬಸ್ ನಿಲ್ದಾಣದಲ್ಲಿ ರಕ್ಷಣಾ ಸಾಮಗ್ರಿ ಹಾಕಿ ಮೃತದೇಹ ಇಡಲಾಗಿತ್ತು.
ಕೆಲ ಸಮಯದ ನಂತರ ಮೃತದೇಹವನ್ನು ಸರ್ಕಾರದ ಎಸ್ಒಪಿ ಪ್ರಕಾರ ಅಂತ್ಯಕ್ರಿಯೆ ಮಾಡಲಾಗಿತ್ತು. ಪ್ರಕರಣದ ಕುರಿತು ವಿಚಾರಣೆ ನಡೆಸಲು ಡಿಹೆಚ್ಒಗೆ ಸೂಚಿಸಲಾಗಿತ್ತು. ಈಗ ಮೃತನ ವರದಿ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಮಾಹಿತಿ ನೀಡಿದ್ದಾರೆ.