ಹಾವೇರಿ:ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ.
ಹಾವೇರಿಯ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢ: ಠಾಣೆ ಸೀಲ್ಡೌನ್ - Kumarapatnam Police Station
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕುಮಾರಪಟ್ಟಣಂ, ಹಿರೇಕೆರೂರು ಮತ್ತು ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗೆ ಕೊರೊನಾ ವಕ್ಕರಿಸಿದೆ.

ಹಾವೇರಿಯ 7 ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢ: ಠಾಣೆ ಸೀಲ್ಡೌನ್
ಹಾವೇರಿ ಜಿಲ್ಲೆಯಲ್ಲಿ ಕೊರೊನಾ ವಾರಿಯರ್ಸ್ಗಳಾಗಿ ದುಡಿಯುತ್ತಿರುವ ಪೊಲೀಸ್ ಇಲಾಖೆಗೆ ಕೊರೊನಾ ಬೆಂಬಿಡದೆ ಕಾಡುತ್ತಿದೆ. ಜಿಲ್ಲೆಯ ಹಿರೇಕೆರೂರು ಪೊಲೀಸ್ ಠಾಣೆಯ ಐವರು ಕಾನ್ಸ್ಟೇಬಲ್ಗೆ ಕೊರೊನಾ ದೃಢಪಟ್ಟಿದೆ. ಹಾವೇರಿ ಸಂಚಾರಿ ಪೊಲೀಸ್ ಠಾಣೆಯ ಒಬ್ಬ ಕಾನ್ಸ್ಟೇಬಲ್ ಒಬ್ಬರಲ್ಲಿ ಕೊರೊನಾ ವೈರಾಣು ಪತ್ತೆಯಾಗಿದೆ. ಇನ್ನೂ ಕುಮಾರಪಟ್ಟಣಂ ಪೊಲೀಸ್ ಠಾಣೆಯಲ್ಲೂ ಒಬ್ಬರು ಕಾನ್ಸ್ಟೇಬಲ್ಗೆ ಕೊರೊನಾ ದೃಢವಾಗಿದೆ.
ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢವಾಗಿರುವ ಹಿನ್ನೆಲೆ ಹಾವೇರಿ ಸಂಚಾರಿ ಪೊಲೀಸ್ ಠಾಣೆ, ಹಿರೇಕೆರೂರು ಹಾಗೂ ಕುಮಾರಪಟ್ಟಣಂ ಪೊಲೀಸ್ ಠಾಣೆಗಳನ್ನು ಸೀಲ್ಡೌನ್ ಮಾಡಲಾಗಿದೆ.