ಹಾವೇರಿ: ಜಿಲ್ಲೆಯ ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಶಾಸಕ ವಿರೂಪಾಕ್ಷಪ್ಪ ಬಳ್ಳಾರಿಗೆ ತಗುಲಿದ ಕೊರೊನಾ ಸೋಂಕು! - Haveri latest news
ಬ್ಯಾಡಗಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
Corona for mla virupakshappa Ballary
ತಾಲ್ಲೂಕಾಸ್ಪತ್ರೆಯಲ್ಲಿ ಪರೀಕ್ಷೆ ನಡೆಸಿದ ವೇಳೆ ಶಾಸಕರಿಗೆ ಪಾಸಿಟಿವ್ ವರದಿ ಬಂದಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕಕ್ಕೆ ಬಂದಿರುವ ಅಧಿಕಾರಿಗಳಿಗೆ ಮತ್ತು ಕಾರ್ಯಕರ್ತರಿಗೆ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ವಿರೂಪಾಕ್ಷಪ್ಪ ಮನವಿ ಮಾಡಿದ್ದಾರೆ.