ರಾಣೆಬೆನ್ನೂರು:ಎಲ್ಲೆಡೆ ಕೊರೊನಾ ಭೀತಿ ಆವರಿಸಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಮಾಂಸಹಾರಿ ಹಾಗೂ ಸಸ್ಯಹಾರಿ ಮತ್ತು ಬೀದಿ ಬದಿಯ ಎಗ್ರೈಸ್ ಮಾಡುವ ಅಂಗಡಿಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಬೇಕು ಎಂದು ಮಾಲೀಕರಿಗೆ ತಹಶೀಲ್ದಾರ್ ಬಸನಗೌಡ ಕೊಟೂರು ಆದೇಶಿಸಿದ್ದಾರೆ.
ರಾಣೆಬೆನ್ನೂರಿನಲ್ಲಿ ಕೊರೊನಾ ಭೀತಿ... ಎಲ್ಲಾ ಹೋಟೆಲ್ ಬಂದ್ ಮಾಡುವಂತೆ ತಹಶೀಲ್ದಾರ್ ಆದೇಶ
ದೇಶಾದ್ಯಂತ ಕೊರೊನಾ ವೈರಸ್ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈಗಾಗಲೇ ತಾಲೂಕಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಶುಚಿತ್ವ ಮತ್ತು ಸ್ವಚ್ಛತೆ ಕಾಪಾಡಿಕೊಳ್ಳಲು ತಿಳಿಸಲಾಗಿದೆ ಎಂದು ತಹಶೀಲ್ದಾರ್ ಬಸನಗೌಡ ಕೊಟೂರು ತಿಳಿಸಿದ್ದಾರೆ.
ನಗರದ ತಹಶೀಲ್ದಾರ್ ಕಾರ್ಯಾಲಯದಲ್ಲಿ ನಡೆದ ಹೋಟೆಲ್ ವ್ಯಾಪಾರಸ್ಥರ ಹಾಗೂ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ದೇಶಾದ್ಯಂತ ಕೊರೊನಾ ವೈರಸ್ ಅಧಿಕವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಈಗಾಗಲೇ ತಾಲೂಕಿನಲ್ಲಿ ಎಲ್ಲ ಅಧಿಕಾರಿಗಳಿಗೆ ಶುಚಿತ್ವ ಮತ್ತು ಸ್ವಚ್ಛತೆ ಕಾಪಾಡಿಕೊಳ್ಳಲು ತಿಳಿಸಲಾಗಿದೆ. ಈ ನಿಟ್ಟಿನಲ್ಲಿ ನಗರದ ಎಲ್ಲ ವ್ಯಾಪಾರಸ್ಥರು ಹಾಗೂ ಮಾಲೀಕರು ಸ್ವಚ್ಚತೆಯ ಬಗ್ಗೆ ಸಹಕರಿಸಬೇಕಾಗಿದೆ ಎಂದರು.
ಕಲ್ಯಾಣ ಮಂಟಪದಲ್ಲಿ ನೂರಕ್ಕಿಂತ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಕೊಡಬೇಡಿ ಎಂದು ಮಾಹಿತಿ ನೀಡಲಾಗಿದೆ ಎಂದ ಅವರು, ಸದ್ಯ ರಾಣೆಬೆನ್ನೂರು ನಗರದಲ್ಲಿ ತಾತ್ಕಾಲಿಕವಾಗಿ ಹೋಟೆಲ್ ಬಂದ್ ಮಾಡುವಂತೆ ಮಾಲೀಕರಿಗೆ ಮನವಿ ಮಾಡಿದರು.