ಹಾವೇರಿ: ಜಿಲ್ಲೆಯಲ್ಲಿಂದು 13 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 288ಕ್ಕೆ ಏರಿಕೆಯಾಗಿದೆ.
ಹಾವೇರಿ ಜಿಲ್ಲೆಯಲ್ಲಿಂದು 13 ಜನರಿಗೆ ಕೊರೊನಾ..12 ಮಂದಿ ಡಿಸ್ಚಾರ್ಜ್
ಹಾವೇರಿ ಜಿಲ್ಲೆಯಲ್ಲಿಂದು 13 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಹಾವೇರಿ ತಾಲೂಕಿನಲ್ಲಿ ನಾಲ್ಕು, ಶಿಗ್ಗಾವಿಯಲ್ಲಿ ಒಂದು, ಬ್ಯಾಡಗಿ ತಾಲೂಕಿನಲ್ಲಿ ಆರು ಮತ್ತು ಹಾನಗಲ್‌ನಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ. ತಾಲೂಕಿನ ಕನವಳ್ಳಿ ಗ್ರಾಮದ 45 ವರ್ಷದ ವ್ಯಕ್ತಿ ಕೋವಿಡ್ಗೆ ಬಲಿಯಾಗಿದ್ದಾರೆ. ಅವರ ಅಂತ್ಯಕ್ರಿಯೆಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಆರೋಗ್ಯ ಇಲಾಖೆಯ ಮಾರ್ಗದರ್ಶನದಂತೆ ನಡೆಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇಂದು 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಒಟ್ಟು 288 ಸೋಂಕಿತರ ಪೈಕಿ 134 ಜನ ಗುಣಮುಖರಾಗಿದ್ದು, 150 ಸಕ್ರಿಯ ಪ್ರಕರಣಗಳಿವೆ. ಈವರೆಗೆ ನಾಲ್ಕು ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.