ಕರ್ನಾಟಕ

karnataka

ಹಾವೇರಿಯಲ್ಲಿ 8 ಪೊಲೀಸ್ ಸಿಬ್ಬಂದಿಗೆ ಕೊರೊನಾ: ಓರ್ವ ಸಿಬ್ಬಂದಿ ಸಾವು

By

Published : May 4, 2021, 7:04 AM IST

ಜಿಲ್ಲೆಯ 8 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ. ಇವರ ಪೈಕಿ ಓರ್ವ ಸಿಬ್ಬಂದಿ ಬಹುಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಉಳಿದಂತೆ ಏಳು ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ- ಎಸ್ಪಿ

8 ಪೊಲೀಸ್ ಸಿಬ್ಬಂದಿಗೆ ಕೊರೊನಾ
8 ಪೊಲೀಸ್ ಸಿಬ್ಬಂದಿಗೆ ಕೊರೊನಾ

ಹಾವೇರಿ: ಜಿಲ್ಲೆಯ ಎಂಟು ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಜಿ.ದೇವರಾಜ್ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ 8 ಪೊಲೀಸ್ ಸಿಬ್ಬಂದಿಗೆ ಕೊರೊನಾ

ನಗರದಲ್ಲಿ ಮಾತನಾಡಿದ ಅವರು, 8 ಜನರಿಗೆ ಸೋಂಕು ತಗುಲಿದೆ. ಇದರಲ್ಲಿ ಓರ್ವರು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ. ಉಳಿದಂತೆ ಏಳು ಸಿಬ್ಬಂದಿಯಲ್ಲಿ ಐವರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಳು ಜನ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದರಿಂದ ಚೇತರಿಕೆ ಕಾಣುತ್ತಿದ್ದಾರೆ ಎಂದು ತಿಳಿಸಿದರು.

ಆದಷ್ಟು ಬೇಗ ಈ ಏಳು ಜನ ಕರ್ತವ್ಯಕ್ಕೆ ಮರಳಲಿದ್ದಾರೆ. ಸರ್ಕಾರದಿಂದ ಬರುವ ಎಲ್ಲ ನಿಯಮಗಳನ್ನು ನಾವು ಅನುಸರಿಸುತ್ತಿದ್ದೇವೆ. ಅಲ್ಲದೆ ಪೊಲೀಸ್ ಸಿಬ್ಬಂದಿಗೆ ಸೋಂಕು ತಗುಲದಂತೆ ರಕ್ಷಣೆಗೆ ಬೇಕಾದ ಪರಿಕರಗಳನ್ನು ಒದಗಿಸಿದ್ದೇವೆ. ಸಾರ್ವಜನಿಕರು ಸಹ ಪೊಲೀಸರ ಕರ್ತವ್ಯಕ್ಕೆ ಸಹಕರಿಸಬೇಕು, ಮುಂಜಾಗೃತಾ ಕ್ರಮಗಳನ್ನು ಅನುಸರಿಸಬೇಕು ಎಂದು ಎಸ್ಪಿ ಸಾರ್ವಕನಿಕರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: ಚಾಮರಾಜನಗರ ಆಕ್ಸಿಜನ್​ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ: ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ

ABOUT THE AUTHOR

...view details