ಹಾವೇರಿ: ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.
ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಪಾಸಿಟಿವ್ - haveri corona update
ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ ಜಿಲ್ಲೆಯಲ್ಲಿಂದು ನಾಲ್ವರಿಗೆ ಕೊರೊನಾ ಪಾಸಿಟಿವ್
ಹಾವೇರಿ ತಾಲೂಕಿನಲ್ಲಿ 1, ಹಾನಗಲ್ ತಾಲೂಕಿನಲ್ಲಿ 2 ಮತ್ತು ಹಿರೇಕೆರೂರು ತಾಲೂಕಿನಲ್ಲಿ 1 ಸೇರಿ ಒಟ್ಟು ನಾಲ್ವರಿಗೆ ಸೋಂಕು ತಗುಲಿದೆ. ಒಟ್ಟು 123 ಸೋಂಕಿತರ ಪೈಕಿ 33 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, 88 ಪ್ರಕರಣಗಳು ಸಕ್ರಿಯ ಪ್ರಕರಣಗಳಿವೆ.