ರಾಣೆಬೆನ್ನೂರು: ಅನಾರೋಗ್ಯದಿಂದ ಮೃತಪಟ್ಟ ಕೊರೊನಾ ಶಂಕಿತ ವ್ಯಕ್ತಿಯ ಮೃತದೇಹವನ್ನ ಆಸ್ಪತ್ರೆ ಪಕ್ಕದ ಬಸ್ ನಿಲ್ದಾಣದಲ್ಲಿ ಇಟ್ಟಿರುವ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಸರ್ಕಾರಿ ಆಸ್ಪತ್ರೆ ಬಳಿ ನಡೆದಿದೆ.
ರಾಣೆಬೆನ್ನೂರು: ಬಸ್ ನಿಲ್ದಾಣದಲ್ಲಿ ಮೃತದೇಹ ಇಟ್ಟ ತಾಲೂಕು ಆಸ್ಪತ್ರೆ ಸಿಬ್ಬಂದಿ! - ಮಾನವೀಯತೆ ಮರೆತ ರಾಣೆಬೆನ್ನೂರು ತಾಲೂಕು ಆಸ್ಪತ್ರೆ ಸಿಬ್ಬಂದಿ
ಕೊರೊನಾ ಶಂಕಿತ ವ್ಯಕ್ತಿಯ ಮೃತದೇಹವನ್ನ ಆಸ್ಪತ್ರೆ ಪಕ್ಕದ ಬಸ್ ನಿಲ್ದಾಣದಲ್ಲಿ ಇಟ್ಟಿರುವ ಆಸ್ಪತ್ರೆಯ ಸಿಬ್ಬಂದಿ ಕಾರ್ಯಕ್ಕೆ ಆಕ್ರೋಶ ವ್ಯಕ್ತವಾಗಿದೆ.
ಮಾನವೀಯತೆ ಮರೆತ ರಾಣೆಬೆನ್ನೂರು ತಾಲೂಕು ಆಸ್ಪತ್ರೆ ಸಿಬ್ಬಂದಿ
ಸರ್ಕಾರಿ ಆಸ್ಪತ್ರೆ ಪಕ್ಕದಲ್ಲಿರುವ ಬಸ್ ನಿಲ್ದಾಣದಲ್ಲಿ ಮೃತದೇಹಕ್ಕೆ ಸುರಕ್ಷತಾ ಸಾಮಗ್ರಿಯಿಂದ ಸುತ್ತಿ ಎರಡ್ಮೂರು ಗಂಟೆಗಳ ಕಾಲ ಮೃತದೇಹವನ್ನು ಆಸ್ಪತ್ರೆ ಸಿಬ್ಬಂದಿ ಅಲ್ಲಿಯೇ ಬಿಟ್ಟಿದ್ದಾರೆ. ಇದರಿಂದ ದಾರಿಯಲ್ಲಿ ಹೋಗುವ ಸಾರ್ವಜನಿಕರು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಕಾರ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ಎಚ್ಚೆತ್ತುಕೊಂಡ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು ಹೋಗಿದ್ದಾರೆ.
ಮೃತ ವ್ಯಕ್ತಿ ಮೂರು ದಿನಗಳ ಹಿಂದೆ ಕೆಮ್ಮಿನಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತನ ಸ್ವ್ಯಾಬ್ ಲ್ಯಾಬ್ಗೆ ಕಳಿಸಲಾಗಿದೆ. ಆದರೆ ಇನ್ನೂ ವರದಿ ಬಂದಿಲ್ಲ.
TAGGED:
Ranebennur news