ಹಾವೇರಿ: ಕೊರೊನಾ ವೈರಸ್ ಪೀಡಿತ ಇಬ್ಬರು ವಯೋವೃದ್ಧರು ಮೃತಪಟ್ಟಿದ್ದು, ಕುಟುಂಬ ಮತ್ತು ಆಪ್ತರ ಅನುಪಸ್ಥಿತಿಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯವರೇ ಶವಸಂಸ್ಕಾರ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಅಂತ್ಯಕ್ರಿಯೆಗೆ ಬಾರದ ಕುಟುಂಬಸ್ಥರು: ವೈದ್ಯಕೀಯ ಸಿಬ್ಬಂದಿಯಿಂದ ಸೋಂಕಿತರ ಅಂತ್ಯಸಂಸ್ಕಾರ
ಶಿಗ್ಗಾವಿ ಪಟ್ಟಣದ ದೇಸಾಯಿಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲ್ಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆ ಕೊರೊನಾದಿಂದ ಮೃತಪಟ್ಟಿದ್ದರು. ಮೃತರ ಸಂಬಂಧಿಕರಿಗೆ ಬೆಳಗ್ಗೆಯೇ ಜಿಲ್ಲಾಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದರು. ಆದರೆ ಕುಟುಂಬದ ಸದಸ್ಯರು ಅಂತ್ಯಕ್ರಿಯೆಗೆ ಬರಲಿಲ್ಲ.
ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಶಿಗ್ಗಾವಿ ಪಟ್ಟಣದ ದೇಸಾಯಿಗಲ್ಲಿ ನಿವಾಸಿ 75 ವರ್ಷದ ವೃದ್ಧೆ ಮತ್ತು ಹಾವೇರಿ ತಾಲ್ಲೂಕಿನ ಆಲದಕಟ್ಟಿ ಗ್ರಾಮದ 60 ವರ್ಷದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದರು. ಮೃತರ ಸಂಬಂಧಿಕರಿಗೆ ಬೆಳಗ್ಗೆಯೇ ಜಿಲ್ಲಾಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದರು. ಆದರೆ, ಕುಟುಂಬದ ಯಾವೊಬ್ಬ ಸದಸ್ಯರು ಅಂತ್ಯಕ್ರಿಯೆಗೆ ಬರಲಿಲ್ಲ.
ಮೃತರ ಸಂಬಂಧಿಕರ ಐವರಿಗೆ ಪಿಪಿಇ ಕಿಟ್ ಸೇರಿದಂತೆ ರಕ್ಷಣಾ ಸಾಮಗ್ರಿ ಒದಗಿಸುವುದಾಗಿ ಹೇಳಿದ್ದರು. ಇಬ್ಬರು ಮೃತರ ಸಂಬಂಧಿಕರು ಅಂತ್ಯಕ್ರಿಯೆಗೆ ಬರದೆ ನೀವೆ ಅಂತ್ಯಕ್ರಿಯೆ ನೆರವೇರಿಸಿ ಎಂದು ಆರೋಗ್ಯ ಇಲಾಖೆ ಸಿಬ್ಬಂದಿಗೆ ತಿಳಿಸಿದ್ದರು. ಅಂತ್ಯಕ್ರಿಯೆಗೆ ಸಂಬಂಧಿಕರಾರೂ ಬಾರದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಯಿಂದಲೇ ಅಂತ್ಯಕ್ರಿಯೆ ನೆರವೇರಿಸಲಾಯಿತು.