ಹಾವೇರಿ: ಕುಡಿದ ಮತ್ತಿನಲ್ಲಿ ಜಗಳ ಮಾಡುವಾಗ ವ್ಯಕ್ತಿಯೊಬ್ಬ ತನ್ನ ಮಾವನನ್ನೇ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಗ್ರಾಮದಲ್ಲಿ ನಡೆದಿದೆ.
ಮೈಲಾರಪ್ಪ (43) ಕೊಲೆಯಾದ ವ್ಯಕ್ತಿ. ರಮೇಶ್ (25) ಕೊಲೆಗೈದ ಆರೋಪಿ. ಮಾವ ಹಾಗೂ ಅಳಿಯ ರಮೇಶ್ ನಡುವೆ ಜಗಳ ನಡೆದಿದೆ. ಈ ವೇಳೆ ಸಿಟ್ಟಿನಿಂದ ಮಾವ ಮೈಲಾರಪ್ಪನನ್ನು ಗೋಡೆಗೆ ಬಲವಾಗಿ ತಳ್ಳಿದ್ದಾನೆ. ಇದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಇಬ್ಬರ ನಡುವೆ ಕೆಲವು ದಿನಗಳಿಂದ ನಿರಂತರ ಕಲಹ ನಡೆಯುತ್ತಿತ್ತು. ಅದು ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಆರೋಪಿ ರಮೇಶ್‌ನನ್ನು ಆಡೂರು ಪೊಲೀಸರು ಬಂಧಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾವೇರಿ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಡಾ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಪತ್ನಿಯ ಮೇಲೆ ಸಂಶಯ : ಬ್ಲೇಡ್‌ನಿಂದ 26 ದಿನಗಳ ಮಗುವಿನ ಕುತ್ತಿಗೆ ಕೊಯ್ದ ಪಾಪಿ ಅಪ್ಪ!
ಮಾವನಿಗೆ 20ಕ್ಕೂ ಹೆಚ್ಚು ಬಾರಿ ಇರಿದು ಕೊಂದ ಅಳಿಯ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ಮಾವನನ್ನೇ ಅಳಿಯನೋರ್ವ 20ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸುಳ್ಳ ಗ್ರಾಮದಲ್ಲಿ ಇತ್ತೀಚೆಗೆ ನಡೆದಿತ್ತು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಸುಳ್ಳ ಗ್ರಾಮದ ಶಿವಪ್ಪ ಕೊಲೆಯಾದ ವ್ಯಕ್ತಿ. ಶಿವಪ್ಪ ಜತೆ ಅವರ ಅಳಿಯ ಆಸ್ತಿಯ ವಿಚಾರಕ್ಕೆ ಜಗಳ ತೆಗೆದು ಗ್ರಾಮದ ಹಾಲಿನ ಕೇಂದ್ರದ ಮುಂದೆಯೇ ಕೊಲೆ ಮಾಡಿದ್ದ.