ಹಾವೇರಿ: ಒಂಬತ್ತು ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲ, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
9 ತಿಂಗಳ ಬಾಕಿ ವೇತನಕ್ಕೆ ಆಗ್ರಹಿಸಿ ದಿನಗೂಲಿ ನೌಕರರ ಪ್ರತಿಭಟನೆ - daily Employees protest
ಬಾಕಿ ವೇತನಕ್ಕೆ ಆಗ್ರಹಿಸಿ ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾಮಂಡಲ ಹಾವೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ
ಸಮಾಜ ಕಲ್ಯಾಣ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಗುತ್ತಿಗೆ ನೌಕರರು ಕೆಲಸ ಮಾಡುತ್ತಿದ್ದಾರೆ. ಲಾಕಡೌನ್ ಆರಂಭವಾದಾಗಿನಿಂದ ತಮಗೆ ವೇತನವಿಲ್ಲ. ಸರ್ಕಾರ ಈ ಕೂಡಲೇ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಸಬೇಕು ಎಂದು ಒತ್ತಾಯಿಸಿದರು.
ವೇತನವಿಲ್ಲದ ಬದುಕು ನಡೆಸುವುದು ಕಷ್ಟವಾಗಿದೆ. ಗುತ್ತಿಗೆ ಪದ್ದತಿಯನ್ನು ರದ್ದುಗೊಳಿಸುವಂತೆ ನೌಕರರು ಒತ್ತಾಯಿಸಿದರು.