ಹಾವೇರಿ: ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ ಬಳಿ ನಡೆದಿದೆ.
ಹಾವೇರಿ: ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು - Puradakeri village of Ratttihalli taluk in Haveri district
ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಪುರದಕೇರಿ ಗ್ರಾಮದ ಬಳಿ ನಡೆದಿದೆ.
ಬೈಕ್‌ನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮೃತನನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೀಟೂರು ಗ್ರಾಮದ ಸುರೇಶ್ (35) ಎಂದು ಗುರುತಿಸಲಾಗಿದೆ. ಸಹೋದರನ ಮದುವೆಯ ಹಿನ್ನೆಲೆ ಕಮಲಾಪುರ ಗ್ರಾಮಕ್ಕೆ ಲಗ್ನಪತ್ರಿಕೆ ವಿತರಿಸಲು ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಸ್ಥಳಕ್ಕೆ ರಟ್ಟೀಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.